ಬಿಎಸ್‌ವೈ ಜಾಮೀನು ಅರ್ಜಿ ವಿಚಾರಣೆ ಅ.24ಕ್ಕೆ ಮುಂದೂಡಿಕೆ

7

ಬಿಎಸ್‌ವೈ ಜಾಮೀನು ಅರ್ಜಿ ವಿಚಾರಣೆ ಅ.24ಕ್ಕೆ ಮುಂದೂಡಿಕೆ

Published:
Updated:

ಬೆಂಗಳೂರು: ಭೂಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ಜಾಮೀನು ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಅಕ್ಟೋಬರ್ 24ಕ್ಕೆ ಮುಂದೂಡಿತು.ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಬಿ.ವಿ.ಪಿಂಟೊ ಅವರಿದ್ದ ಏಕಸದಸ್ಯ ಪೀಠವು ವಿಚಾರಣೆಯನ್ನು  ಅಕ್ಟೋಬರ್ 24ಕ್ಕೆ ಮುಂದೂಡಿದೆ.ವಿಚಾರಣೆಯ ವೇಳೆ ಯಡಿಯೂರಪ್ಪ ಅವರ ಪರವಾಗಿ ವಕೀಲ ಜಯಕುಮಾರ್ ಎಸ್.ಪಾಟೀಲ ಹಾಗೂ  ಸಿರಾಜಿನ್ ಬಾಷಾ ಪರ ವಕೀಲ ಸಿ.ಎಚ್. ಹನುಮಂತರಾಯ ಅವರು ವಾದ ಮಂಡಿಸಿದರು.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry