ಬಿಎಸ್‌ವೈ ಪಕ್ಷದ ಬಗ್ಗೆ ಕಾಂಗ್ರೆಸ್‌ಗೆ ಚಿಂತೆ ಇಲ್ಲ

7

ಬಿಎಸ್‌ವೈ ಪಕ್ಷದ ಬಗ್ಗೆ ಕಾಂಗ್ರೆಸ್‌ಗೆ ಚಿಂತೆ ಇಲ್ಲ

Published:
Updated:

ಮಂಗಳೂರು: `ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷ ಕಟ್ಟುವ ಬಗ್ಗೆ ಕಾಂಗ್ರೆಸ್ ತಲೆ ಕೆಡಿಸಿಕೊಳ್ಳುವುದಿಲ್ಲ~ ಎಂದು ಕೇಂದ್ರ ಇಂಧನ ಸಚಿವ ಎಂ.ವೀರಪ್ಪ ಮೊಯಿಲಿ ತಿಳಿಸಿದರು.ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, `ನಮ್ಮ ದಾರಿ ಬೇರೆಯೇ ಇದೆ. ನಾವು ವಾಮ ಮಾರ್ಗದಲ್ಲಿ ಹೋಗುವುದಿಲ್ಲ. ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ನ ಗೆಲುವಿನ ಓಟಕ್ಕೆ ಅಡ್ಡಿಯಾಗುವುದಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಎರಡರಷ್ಟು ಬಹುಮತದಿಂದ ಅಧಿಕಾರಕ್ಕೆ ಬರಲಿದೆ~ ಎಂದು ಭವಿಷ್ಯ ನುಡಿದರು.`ಮೂವರು ಮುಖ್ಯಮಂತ್ರಿಗಳನ್ನು ಕಂಡರೂ ಬಿಜೆಪಿ ಸರ್ಕಾರದ ಆಡಳಿತ ವೈಖರಿ ಬದಲಾಗಿಲ್ಲ. ಲೋಕಾಯುಕ್ತ ವರದಿಯ ಶಿಫಾರಸುಗಳನ್ನು ಸರ್ಕಾರ ಇನ್ನೂ ಜಾರಿ ಮಾಡಿಲ್ಲ. ಆ ಪಕ್ಷದಲ್ಲಿ ಭ್ರಷ್ಟಾಚಾರ ಹಾಗೂ ಅಧಿಕಾರದ ದಾಹ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಎಲ್ಲ ಹಗರಣಗಳ ತನಿಖೆ ನಡೆಸಲಾಗುವುದು~ ಎಂದರು.`ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇದೇ 18ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಇದರಿಂದ ಕರಾವಳಿಯಲ್ಲಿ ಹಾಗೂ ರಾಜ್ಯದಲ್ಲಿ ಪಕ್ಷ ಸಧೃಡವಾಗಲಿದೆ~ ಎಂದರು.`ರಾಬರ್ಟ್ ವಾದ್ರಾ ವಿರುದ್ಧ ಆರೋಪ ರಾಜಕೀಯ ಪ್ರೇರಿತ. ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ~ ಎಂದು ಮೊಯಿಲಿ ತಿಳಿಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry