ಮಂಗಳವಾರ, ಮೇ 18, 2021
31 °C

ಬಿಎಸ್‌ವೈ ವಾಪಸ್: ಆರ್‌ಎಸ್‌ಎಸ್ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮರಳಿ ಬಿಜೆಪಿಗೆ ಕರೆತರುವ ಸಂಬಂಧ ಆರ್‌ಎಸ್‌ಎಸ್ ಪ್ರಮುಖರು ಚರ್ಚೆ ನಡೆಸಿದ್ದು, ಅಂತಿಮ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ಬಿಜೆಪಿ ರಾಜ್ಯ ನಾಯಕರಿಗೆ ನೀಡಲಾಗಿದೆ.

ಆರ್‌ಎಸ್‌ಎಸ್ ಪ್ರಮುಖರ ಸಮ್ಮುಖದಲ್ಲಿ ಮಂಗಳವಾರ ನಡೆದ ಪಕ್ಷದ ರಾಜ್ಯ ಮುಖಂಡರ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಬಸವನಗುಡಿಯಲ್ಲಿರುವ ಪಕ್ಷದ ಮುಖಂಡರ ನಿವಾಸದಲ್ಲಿ ಈ ಸಭೆ ನಡೆಯಿತು.ಪಕ್ಷದ ಮುಖಂಡರಾದ ಪ್ರಹ್ಲಾದ್ ಜೋಶಿ, ಜಗದೀಶ ಶೆಟ್ಟರ್, ಡಿ.ವಿ.ಸದಾನಂದ ಗೌಡ, ಆರ್. ಅಶೋಕ, ಕೆ.ಎಸ್.ಈಶ್ವರಪ್ಪ, ಸಂತೋಷ್, ಸತೀಶ್, ಆರ್‌ಎಸ್‌ಎಸ್ ಮುಖಂಡರಾದ ಮಂಗೇಶ ಭೇಂಡೆ ಮತ್ತು ಗೋಪಾಲ ಸಭೆಯಲ್ಲಿ ಭಾಗವಹಿಸಿದ್ದರು.`ನನ್ನ ಮೊದಲ ಆದ್ಯತೆ ಬಿಜೆಪಿಗೆ ಮರಳುವುದು. ಒಂದು ವೇಳೆ ಅದಕ್ಕೆ ವಿರೋಧ ವ್ಯಕ್ತವಾದರೆ ಜೆಡಿಎಸ್, ಸಮಾಜವಾದಿ ಪಕ್ಷ ಅಥವಾ ಬಿಎಸ್‌ಆರ್ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸುತ್ತೇನೆ' ಎಂದು ಯಡಿಯೂರಪ್ಪ ಅವರು ಶಾಸಕರೊಬ್ಬರ ಮೂಲಕ ಬಿಜೆಪಿ ನಾಯಕರಿಗೆ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಈ ಸಭೆ ನಡೆಯಿತು ಎಂದು ಮೂಲಗಳು ತಿಳಿಸಿವೆ.ಸಭೆಯಲ್ಲಿದ್ದ ಬಹುತೇಕರು ಯಡಿಯೂರಪ್ಪ ಅವರು ಪಕ್ಷಕ್ಕೆ ಮರಳುವುದಕ್ಕೆ ತಮ್ಮ ವಿರೋಧ ಏನೂ ಇಲ್ಲ ಎಂದು ಹೇಳಿದ್ದಾರೆ. ಆದರೆ, ಅದಕ್ಕೆ ಪಕ್ಷದ ರಾಷ್ಟ್ರೀಯ ನಾಯಕರು ಒಪ್ಪಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.

ದೆಹಲಿಯಲ್ಲಿನ ರಾಜಕೀಯ ವಿದ್ಯಮಾನಗಳ ಕಾರಣ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಮಂಗಳವಾರದ ಸಭೆಗೆ ಗೈರು ಹಾಜರಾಗಿದ್ದರು.ಅವರು ನಗರಕ್ಕೆ ವಾಪಸಾದ ನಂತರ ಅವರ ಸಮ್ಮುಖದಲ್ಲಿ ಮತ್ತೊಮ್ಮೆ ಸಭೆ ಸೇರಿ, ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಕರೆ ತರುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.