ಬಿಎಸ್ವೈ ವಿಚಾರಣೆ ಮುಂದಕ್ಕೆ
ಬೆಂಗಳೂರು: ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ವಕೀಲ ಸಿರಾಜಿನ್ ಬಾಷಾ ದಾಖಲು ಮಾಡಿರುವ 1ನೇ ದೂರಿನ ವಿಚಾರಣೆಲೋಕಾಯುಕ್ತ ವಿಶೇಷ ಕೋರ್ಟ್ ಶನಿವಾರ ನ.16ಕ್ಕೆ ಮುಂದೂಡಿದೆ.
ಈ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ನಡೆಸಿರುವ ತನಿಖಾ ವರದಿಯ ಪ್ರತಿಯನ್ನು ಬಾಷಾ ಪರ ವಕೀಲರಿಗೆ ನೀಡುವಂತೆ ನ್ಯಾಯಾಲಯದ ರಿಜಿಸ್ಟ್ರಾರ್ ಕಚೇರಿಗೆ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಸೂಚಿಸಿದರು.
ಈ ವರದಿಗೆ ಆಕ್ಷೇಪಣೆಗಳಿದ್ದರೆ ಮುಂದಿನ ವಿಚಾರಣೆ ವೇಳೆ ಅದನ್ನು ಸಲ್ಲಿಸುವಂತೆ ನ್ಯಾಯಾಧೀಶರು ಆದೇಶಿಸಿದರು. ರಾಚೇನಹಳ್ಳಿ ಬಳಿಯ ಜಮೀನಿಗೆ ಸಂಬಂಧಿಸಿದ ದೂರು ಇದಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.