ಮಂಗಳವಾರ, ಮೇ 18, 2021
28 °C

ಬಿಎಸ್‌ವೈ ವಿರುದ್ಧ ಕ್ರಮ ಏಕಿಲ್ಲ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇತ್ತೀಚೆಗೆ ನಡೆದ ಬಿಜೆಪಿ ರಾಜ್ಯ ಪ್ರಮುಖರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಕ್ಷದ ಹಿರಿಯ ಮುಖಂಡರ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ `ಬಿಜೆಪಿ ಹಿರಿಯರ ವೇದಿಕೆ~ಯ ಅಧ್ಯಕ್ಷ ಬಿ.ಬಿ. ಶಿವಪ್ಪ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರಿಗೆ ಪತ್ರ ಬರೆದಿದ್ದಾರೆ.`ಯಡಿಯೂರಪ್ಪ ಅವರು ನಿಮ್ಮ ಸಮ್ಮುಖದಲ್ಲಿಯೇ ಪಕ್ಷದ ಹಿರಿಯ ನಾಯಕರ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಪಕ್ಷದ ಇಂದಿನ ಸ್ಥಿತಿಗೆ ಹೈಕಮಾಂಡ್ ಕಾರಣ ಎಂದಿದ್ದಾರೆ. ಇಂಥ ಹೇಳಿಕೆ ನೀಡಿದ ಯಡಿಯೂರಪ್ಪ ಅವರ ವಿರುದ್ಧ ಯಾವುದೇ ಶಿಸ್ತುಕ್ರಮ ಜರುಗಿಸುವುದಿಲ್ಲವೇ~ ಎಂದು ಶಿವಪ್ಪ ಅವರು ಪತ್ರದಲ್ಲಿ ಈಶ್ವರಪ್ಪ ಅವರನ್ನು ಪ್ರಶ್ನಿಸಿದ್ದಾರೆ.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ನೂತನ ಮುಖ್ಯಮಂತ್ರಿ ಆಯ್ಕೆ ಮಾಡಬೇಕಾದ ಸಂದರ್ಭದಲ್ಲೂ ಪಕ್ಷದ ಶಾಸಕರು ಮಾಧ್ಯಮಗಳಿಗೆ ಮನಬಂದಂತೆ ಹೇಳಿಕೆ ನೀಡಿದರು. ಇದರಿಂದ ಪಕ್ಷದ ಗೌರವವೂ ಹಾಳಾಯಿತು. ಅವರ ವಿರುದ್ಧವೂ ಪಕ್ಷ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.`ಬಿಜೆಪಿಯಲ್ಲಿ ಪಕ್ಷಕ್ಕಿಂತ ವ್ಯಕ್ತಿಯೇ ದೊಡ್ಡವ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ. ಹಿರಿಯ ನಾಯಕರಾದ ನೀವೇ ಇಂಥ ಸಂದರ್ಭದಲ್ಲಿ ದಿಟ್ಟತನ ತೋರದಿದ್ದರೆ ಪಕ್ಷದ ಸ್ಥಿತಿ ಏನಾಗಬಹುದು ಎಂಬ ಆತಂಕ ಮೂಡುತ್ತಿದೆ~ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.