ಗುರುವಾರ , ಅಕ್ಟೋಬರ್ 17, 2019
27 °C

ಬಿಎಸ್‌ವೈ ವಿರುದ್ಧ ಶಿವಪ್ಪ ಪ್ರವಾಸ

Published:
Updated:

ಮೈಸೂರು: `ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿರುವುದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಇದನ್ನು ರಾಜ್ಯದ ಜನತೆಗೆ ಮನವರಿಕೆ ಮಾಡಿಕೊಡಲು ಜ.16 ರಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತೇನೆ~ ಎಂದು ಬಿಜೆಪಿಯ ಹಿರಿಯ ಮುಖಂಡ ಬಿ.ಬಿ.ಶಿವಪ್ಪ ಭಾನುವಾರ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಹಿರಿಯರ ವೇದಿಕೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.

ಕೂಡಲೇ ಯಡಿಯೂರಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಶಿಸ್ತು ಕ್ರಮ ಕೈಗೊಳ್ಳಬೇಕು. ಯಡಿಯೂರಪ್ಪ ಪಕ್ಷದಲ್ಲಿ ಇರಲಿ ಬಿಡಲಿ, ಬಿಜೆಪಿ ಶಾಶ್ವತವಾಗಿ ಇರುತ್ತದೆ~ ಎಂದು ಹೇಳಿದರು.

Post Comments (+)