ಸೋಮವಾರ, ಜೂನ್ 14, 2021
21 °C

ಬಿಎಸ್‌ವೈ: ಸಿಬಿಐ ತನಿಖೆ ಅನಿಶ್ಚಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: `ಜಿಂದಾಲ್ ಸ್ಟೀಲ್ ವರ್ಕ್ಸ್~ (ಜೆಎಸ್‌ಡಬ್ಲ್ಯು) ಮತ್ತು `ಸೌತ್‌ವೆಸ್ಟ್ ಗಣಿ ಕಂಪೆನಿ~ (ಎಸ್‌ಡಬ್ಲ್ಯುಎಂಸಿ)ಗಳಿಂದ `ದೇಣಿಗೆ~ ಪಡೆದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಸಿಬಿಐ ತನಿಖೆ ನಡೆಸಬೇಕೇ ಎಂಬ ವಿಷಯದಲ್ಲಿ ಇನ್ನೂ ಅನಿಶ್ಚಿತತೆ ಮುಂದುವರೆದಿದೆ.ಅಕ್ರಮ ಗಣಿಗಾರಿಕೆ ಹಗರಣ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ನೇತೃತ್ವದ ಹಸಿರು ಪೀಠ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಸಿಬಿಐ ತನಿಖೆ ಅಗತ್ಯವಿದೆಯೇ ಎಂಬುದನ್ನು ಪರಿಶೀಲಿಸಿ ಎರಡು ವಾರದೊಳಗೆ ವರದಿ ಸಲ್ಲಿಸುವಂತೆ `ಕೇಂದ್ರ ಉನ್ನತಾಧಿಕಾರ ಸಮಿತಿ~ (ಸಿಇಸಿ) ಗೆ ಸೂಚಿಸಿತ್ತು.ಅದರಂತೆ ಸಿಇಸಿ ಕಳೆದ ವಾರ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಿತ್ತು. ಆದರೆ, ಕಳೆದ ಶುಕ್ರವಾರ ಹಸಿರು ಪೀಠ ಕಲಾಪ ನಡೆಸಲಿಲ್ಲ. ಈ ವಾರವೂ ಪೀಠ ಸೇರದಿರುವ ಹಿನ್ನೆಲೆಯಲ್ಲಿ ಸಿಇಸಿ ಮುಂದಿನ ವಾರ ತನ್ನ ವರದಿ ಸಲ್ಲಿಸುವ ಸಾಧ್ಯತೆ ಇದೆ. ಸಿಇಸಿ ವರದಿ ಆಧರಿಸಿ ಕೋರ್ಟ್ ಯಡಿಯೂರಪ್ಪ ಅವರ ಹಣೆಬರಹ ನಿರ್ಧರಿಸಲಿದೆ. ಅಕ್ರಮ ಗಣಿಗಾರಿಕೆ ವಿರುದ್ಧ `ಸಮರ~ ಸಾರಿರುವ ಧಾರವಾಡದ ಎಸ್.ಆರ್.ಹಿರೇಮಠ ಅವರ `ಸಮಾಜ ಪರಿವರ್ತನಾ ಸಮುದಾಯ~ (ಎಸ್‌ಪಿಎಸ್) ಮಾಜಿ ಮುಖ್ಯಮಂತ್ರಿ ಮತ್ತು ಕುಟುಂಬದ ಸದಸ್ಯರ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.