ಬಿಐಎಎಲ್‌ಗೆ `ಕೆಂಪೇಗೌಡ' ಹೆಸರು: ಕೇಂದ್ರ ಸಮ್ಮತಿ

ಭಾನುವಾರ, ಜೂಲೈ 21, 2019
27 °C

ಬಿಐಎಎಲ್‌ಗೆ `ಕೆಂಪೇಗೌಡ' ಹೆಸರು: ಕೇಂದ್ರ ಸಮ್ಮತಿ

Published:
Updated:

ನವದೆಹಲಿ: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ `ಬೆಂಗಳೂರು ನಗರದ ನಿರ್ಮಾತೃ' ಕೆಂಪೇಗೌಡರ ಹೆಸರು ನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಕೊನೆಗೂ ಬುಧವಾರ ಒಪ್ಪಿಗೆ ನೀಡಿತು.ಪ್ರಧಾನಿ ಮನಮೋಹನ್‌ಸಿಂಗ್ ಅಧ್ಯಕ್ಷತೆಯಲ್ಲಿ ಸೇರಿದ್ದ ಸಂಪುಟದ ಸಭೆ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಲು ಒಪ್ಪಿಗೆ ನೀಡಿತು ಎಂದು ರೈಲ್ವೆ ಸಚಿವ ಎಂ. ಮಲ್ಲಿಕಾರ್ಜುನ ಖರ್ಗೆ `ಪ್ರಜಾವಾಣಿ'ಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry