ಭಾನುವಾರ, ಮೇ 22, 2022
27 °C

ಬಿಜಿಎಂಎಲ್ ಪುನರಾರಂಭಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಿವಾಸಪುರ: ಪಟ್ಟಣದಲ್ಲಿ ಬಿಜಿಎಂಎಲ್ ಪುನರಾರಂಭ ಹೋರಾಟ ಸಮಿತಿ ಸದಸ್ಯರು ಕೆಜಿಎಫ್ ಚಿನ್ನದ ಗಣಿಯನ್ನು ಮತ್ತೆ ಆರಂಭಿಸುವಂತೆ ಆಗ್ರಹಿಸಿ ಸಹಿ ಸಂಗ್ರಹ ಮಾಡಿದರು.ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಸಮೀಪ ಈಚೆಗೆ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಪಿ.ಆರ್.ಸೂರ್ಯನಾರಾಯಣ ಸಹಿ ಸಂಗ್ರಹ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ, ಕೋಲಾರ ಜಿಲ್ಲೆಯ ಹೆಮ್ಮೆ ಎನಿಸಿದ್ದ ಚಿನ್ನದ ಗಣಿಗಳನ್ನು ವಿನಾಕಾರಣ ಮುಚ್ಚಿ ಕಾರ್ಮಿಕರ ಕುಟುಂಬಗಳನ್ನು ಬೀದಿಪಾಲು ಮಾಡಲಾಗಿದೆ ಎಂದು ಆಪಾದಿಸಿದರು.ಗಣಿಗಳಲ್ಲಿ ಇನ್ನೂ ಚಿನ್ನದ ಅದಿರು ಇರುವ ಬಗ್ಗೆ ತಜ್ಞರು ವರದಿ ನೀಡಿದ್ದಾರೆ. ಆದರೆ ಸರ್ಕಾರ ನಷ್ಟದ ಹೆಸರಿನಲ್ಲಿ ಗಣಿಯನ್ನು ಮುಚ್ಚಿದೆ. ಇದು ಅಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಜನರ ಕೆಲಸಕ್ಕೆ ಕುತ್ತು ತಂದಿದೆ. ಅವರು ಮತ್ತು ಅವರ ಕುಟುಂಬಗಳ ಸದಸ್ಯರು ಕಷ್ಟದ ಬದುಕನ್ನು ಬದುಕುತ್ತಿದ್ದಾರೆ.

ಕಾರ್ಮಿಕರ ಹಿತದೃಷ್ಟಿ ಮತ್ತು ನೈಸರ್ಗಿಕ ಸಂಪತ್ತನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವ ಉದ್ದೇಶದಿಂದ ಚಿನ್ನದ ಗಣಿಯನ್ನು ಮತ್ತೆ ಆರಂಭಿಸಬೇಕು ಎಂದು ಆಗ್ರಹಪಡಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಪಿ.ಆರ್.ನವೀನ್ ಕುಮಾರ್ ಮತ್ತಿತರರು ಮಾತನಾಡಿ, ಚಿನ್ನದ ಗಣಿಯನ್ನು ಪುನರಾರಂಭ ಮಾಡುವಂತೆ ಆಗ್ರಹಪಡಿಸಿದರು.

ತಾಲ್ಲೂಕಿನ ಬೇರೆ ಬೇರೆ ಸಂಘಟನೆಗಳ ಸದಸ್ಯರು ಹಾಗೂ ಮುಖಂಡರು ಸಹಿ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.