ಗುರುವಾರ , ಜೂನ್ 24, 2021
28 °C

ಬಿಜೆಡಿಯಿಂದ ಟರ್ಕಿ ಕಣಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭುವನೇಶ್ವರ (ಪಿಟಿಐ): ಲೋಕಸಭೆ ಮತ್ತು ಒಡಿಶಾ ವಿಧಾನಸಭೆ ಚುನಾವಣೆಗೆ ಬಿಜೆಡಿ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಲೋಕಸಭೆಯ ಐದು ಕ್ಷೇತ್ರಗಳು ಮತ್ತು ವಿಧಾನಸಭೆಯ 30 ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ.ಅಂತರರಾಷ್ಟ್ರೀಯ ಮಾಜಿ ಹಾಕಿ ಆಟಗಾರ ದಿಲೀಪ್‌ ಟರ್ಕಿ ಸುಂದರಗಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪಟ್ಟಿಯಲ್ಲಿ ರಾಜ ಕುಟುಂಬಕ್ಕೆ ಸೇರಿದ ಮೂವರು ಮತ್ತು ಒಬ್ಬರು ಸಿನಿಮಾ ತಾರೆ ಕೂಡ ಸ್ಥಾನ ಪಡೆದಿದ್ದಾರೆ. ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ತಮ್ಮ ಸ್ವಕ್ಷೇತ್ರ ಹಿಂಜಿಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.