ಸೋಮವಾರ, ಜೂನ್ 14, 2021
22 °C

ಬಿಜೆಡಿ–ಜೆಎಂಎಂ ಮೈತ್ರಿ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭುವನೇಶ್ವರ (ಪಿಟಿಐ): ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಸೀಟು ಹೊಂದಾಣಿಕೆಗೆ ಸಂಬಂಧಿಸಿ­ದಂತೆ ಆಡಳಿತಾರೂಢ ಬಿಜೆಡಿ ಮತ್ತು ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ನಡುವಿನ ಮಾತುಕತೆ ಮುರಿದು ಬಿದ್ದಿದೆ.ಜೆಎಂಎಂ ಹೆಚ್ಚಿನ ಸೀಟು ಬಿಟ್ಟು­ಕೊಡುವಂತೆ ಪಟ್ಟು ಹಿಡಿದಿದ್ದರಿಂದ ಮಾತುಕತೆ ವಿಫಲಗೊಂಡಿದೆ ಎಂದು ಬಿಜೆಡಿಯ ಹಿರಿಯ ಮುಖಂಡ­ರೊಬ್ಬರು ತಿಳಿಸಿದ್ದಾರೆ.‘ಜೆಎಂಎಂನೊಂದಿಗೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲ 147 ವಿಧಾನಸಭೆ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ’ ಎಂದು ಬಿಜೆಡಿ ಉಪಾಧ್ಯಕ್ಷ ಕಲ್ಪತರು ದಾಸ್‌ ಇಲ್ಲಿ ಶನಿವಾರ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.