ಮಾಲೂರು: ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯಶೆಟ್ಟಿ ಅವರನ್ನು ಎರಡು ದಿನಗಳಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ವರಿಷ್ಠರು ಒಪ್ಪಿರುವುದಾಗಿ ಗುರುವಾರ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸೊಣ್ಣೂರು ವೆಂಕಟೇಶ್ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯಶೆಟ್ಟಿ ಅವರನ್ನು ಪುನಃ ಪಕ್ಷಕ್ಕೆ ಕರೆತರಲು ಹಮ್ಮಿಕೊಂಡಿದ್ದ ಸಭೆಯಲ್ಲಿ ಕಾರ್ಯಕರ್ತರು, ಮುಖಂಡರು ಒಮ್ಮತದ ಒಪ್ಪಿಗೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಗುರುವಾರ ಪಕ್ಷದ ವರಿಷ್ಠರಾದ ಅನಂತ್ ಕುಮಾರ್, ಸದಾನಂದಗೌಡ, ಆರ್.ಅಶೋಕ್ ಅವರನ್ನು ಸಮಿತಿ ಬೆಂಗಳೂರಿನಲ್ಲಿ ಭೇಟಿಯಾಗಿ ಕೃಷ್ಣಯ್ಯಶೆಟ್ಟ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಚರ್ಚಿಸಲಾಯಿತು.

ಪಕ್ಷದ ವರಿಷ್ಠರು ಮಾಜಿ ಸಚಿವ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಯಾವುದೇ ಅಭ್ಯಂತರವಿಲ್ಲ. ಎರಡು ದಿನಗಳ ಒಳಗಾಗಿ ನಡೆಯಲಿರುವ ಕೋರ್ ಕಮಿಟಿಯಲ್ಲಿ ಅಂತಿಮವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಸೊಣ್ಣೂರು ವೆಂಕಟೇಶ್ ತಿಳಿಸಿದರು.

ಕಾಂಗ್ರೆಸ್ಗೆ ಎದುರಾಳಿಗಳೇ ಇಲ್ಲ
ಮಾಲೂರು: ಬಿಜೆಪಿ, ಜೆಡಿಎಸ್ ಪಕ್ಷಗಳಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರಿಗೆ ಎದುರಾಳಿಗಳೇ ಅಲ್ಲ ಎಂದು ಕಾಂಗ್ರೆಸ್ ಮುಖಂಡ ಚನ್ನಕೇಶವ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಚಿಕ್ಕಕುಂತೂರು ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ಸಂದರ್ಭ ದೊಡ್ಡಕಡತೂರಿನ ಉದ್ಯಮಿ ಕೆ.ಎ.ಹರಿದಾಸ್ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆ ಗೊಂಡರು. ತಾಲ್ಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕೆ.ಮುನಿರಾಜು, ಕೆ.ಎಚ್.ಚನ್ನರಾಯಪ್ಪ, ಕೆ.ಪಿ.ಸಿ.ಸಿ ಕಾರ್ಯದರ್ಶಿ ಎಸ್.ಎನ್.ರಘುನಾಥ್, ಎ.ಪಿ.ಎಂ.ಸಿ.ಅಧ್ಯಕ್ಷ ಮಹೇಶ್ ಬಾಬು, ಪುರಸಭಾ ಸದಸ್ಯರಾದ ಸಿ.ಲಕ್ಷ್ಮಿನಾರಾಯಣ, ಸಿ.ಪಿ.ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಟಿ.ಎಂ.ಅಶೋಕ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಟಿ.ಬಿ.ಕೃಷ್ಣಪ್ಪ, ಮುಖಂಡರಾದ ರಾಜಗೋಪಾಲರೆಡ್ಡಿ, ಶ್ರೀನಿವಾಸಮೂರ್ತಿ, ಸೊಣ್ಣಹಳ್ಳಿ ಕೃಷ್ಣಪ್ಪ, ಜೂಡೊ ರಮೇಶ್, ಬೋರ್ ರಮೇಶ್, ಸಂಪತ್ ಯಾದವ್, ಮಹಿಳಾ ಘಟಕದ ಅಧ್ಯಕ್ಷೆ ಕಾಂತಮ್ಮ, ನಗರಾಧ್ಯಕ್ಷೆ ಜಯಂತಿ ಶೈಲುಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.