ಶುಕ್ರವಾರ, ಏಪ್ರಿಲ್ 16, 2021
31 °C

ಬಿಜೆಪಿಗೆ ಜನರ ಹಿತ ಬೇಕಿಲ್ಲ: ಕುಮಾರಸ್ವಾಮಿ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್:  ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ಒಳಿತಿಗಿಂತ ಪಕ್ಷದ ಮುಖಂಡರ ಹಿತವೇ ಮುಖ್ಯವಾಗಿದೆ ಎಂದು ಜಾತ್ಯತೀತ ಜನತಾ ದಳ ರಾಜ್ಯ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.ಜಿಲ್ಲಾ ದಲಿತ ಚಳವಳಿಗೆ 25 ವರ್ಷ ಸಂದ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಆಯೋಜಿಸಿದ್ದ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.ಬಿಜೆಪಿ ಆಡಳಿತದಲ್ಲಿ ಶೋಷಿತರಿಗೆ ಅನ್ಯಾಯವಾಗಿದೆ.  ಶೋಷಿತರ ಬಗೆಗಿನ ಕಾಂಗ್ರೆಸ್ ಕಳಕಳಿ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಆರೋಪಿಸಿದರು.ಜಾತ್ಯತೀತ ಜನತಾದಳ ಅಧಿಕಾರದಲ್ಲಿದ್ದಾಗ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಜನತಾದಳ ಯಾವಾಗಲೂ ಶೋಷಿತರ ಧ್ವನಿಯಾಗಿಯೇ ಇದೆ ಎಂದು ಹೇಳಿದರು.ಶೋಷಿತ ವರ್ಗವನ್ನು ಕಡೆಗಣಿಸುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಜನ ಪಾಠ ಕಲಿಸಲು  ಮುಂದಾಗಬೇಕು. ದಲಿತ ಸಂಘಟನೆಗಳು ಸರ್ಕಾರ ರಚಿಸುವ ಮಟ್ಟಿಗೆ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದರು.ಸಂಸದ ಚಲುವರಾಯ ಸ್ವಾಮಿ, ಮಾಜಿ ಸಂಸದ ಜೋಗೇಂದ್ರ ಕಾವಡೆ, ಶಾಸಕ ಬಂಡೆಪ್ಪ ಕಾಶೆಂಪೂರ್, ಮಾಜಿ ಶಾಸಕ ಸೈಯದ್ ಜುಲ್ಫೇಕಾರ್ ಹಾಷ್ಮಿ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ. ಸಾಗರ್, ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ನಸೀಮುದ್ದೀನ್ ಪಟೇಲ್, ಕಾರ್ಯಾಧ್ಯಕ್ಷ ಶಾಂತಲಿಂಗ ಸಾವಳಗಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕಸ್ತೂರಿಬಾಯಿ ಬೌದ್ಧೆ, ವಸಂತ್ ಬಿರಾದಾರ್, ಮಾಜಿ ಸದಸ್ಯ ಡಿ.ಕೆ. ಸಿದ್ರಾಮ್ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.