ಶನಿವಾರ, ಮೇ 28, 2022
22 °C

ಬಿಜೆಪಿಗೆ ಜೆಡಿಎಸ್ ಬೆಂಬಲ: ಯತ್ನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ‘ಯಡಿಯೂರಪ್ಪ ಪಕ್ಷದಿಂದ ನಿರ್ಗಮಿಸಿದರೆ ಬಿಜೆಪಿಗೆ ಬೆಂಬಲ ನೀಡಲು ಜೆಡಿಎಸ್ ಮರು ಚಿಂತನೆ ನಡೆಸುತ್ತಿದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.‘ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಯಡಿಯೂರಪ್ಪ ಹಗರಣಗಳ ವಿರುದ್ಧ ಆ ಪಕ್ಷದ ಶಾಸಕರೇ ಸಿಡಿದೆದ್ದಿದ್ದಾರೆ.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದರೆ ಅವರು ಪಕ್ಷವನ್ನು ಒಡೆದು 15-20 ಜನ ಶಾಸಕರೊಂದಿಗೆ ಹೊರಹೋಗಬಹುದು ಎಂಬ ಆತಂಕ ಶಾಸಕರಲ್ಲಿದೆ. ಆ ಪರಿಸ್ಥಿತಿ ಎದುರಾದರೆ ತಮಗೆ ಬೆಂಬಲ ನೀಡುವಂತೆ ಬಿಜೆಪಿ ಶಾಸಕರು ಕೋರಿದ್ದಾರೆ’ ಎಂದು ಗುರುವಾರ ಇಲ್ಲಿ ಸುದ್ದಿಗೊಷ್ಠಿಯಲ್ಲಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.