ಬುಧವಾರ, ನವೆಂಬರ್ 13, 2019
21 °C

ಬಿಜೆಪಿಗೆ ಶಾಸಕ ವಜ್ಜಲ ರಾಜೀನಾಮೆ

Published:
Updated:

ಲಿಂಗಸುಗೂರ:  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಲಿಂಗಸುಗೂರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಗೊಂಡಿದ್ದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.`ಸ್ವ ಖುಷಿಯಿಂದ, ಯಾವುದೇ ಒತ್ತಡಗಳಿಲ್ಲದೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅಂಗೀಕಾರ ಮಾಡಿ' ಎಂದು ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಿಗೆ ಬುಧವಾರ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ  ಕೋರಿದ್ದಾರೆ.

ಪ್ರತಿಕ್ರಿಯಿಸಿ (+)