ಬಿಜೆಪಿಯನ್ನು ಮತ್ತಷ್ಟು ಬಲಿಷ್ಠಗೊಳಿಸಿ

7

ಬಿಜೆಪಿಯನ್ನು ಮತ್ತಷ್ಟು ಬಲಿಷ್ಠಗೊಳಿಸಿ

Published:
Updated:

ಹಿರೇಕೆರೂರ: `ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಗುರಿ ಹೊಂದಲಾಗಿದೆ~ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.ಪಟ್ಟಣದ ತರಳಬಾಳು ಸಾಂಸ್ಕೃತಿಕ ಕೇಂದ್ರದಲ್ಲಿ ಭಾನುವಾರ ಬಿಜೆಪಿ ಪದಾಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಆಯ್ದ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆ ನಿಟ್ಟಿನಲ್ಲಿ ಸಂಘಟನಾತ್ಮಕ ಚಟುವಟಿಕೆಗಳನ್ನು ಪಕ್ಷದ ಸೂಚನೆಯಂತೆ ಹಮ್ಮಿಕೊಳ್ಳಲಾಗಿದೆ ಎಂದರು.

ಮಾಜಿ ಶಾಸಕ ಯು.ಬಿ.ಬಣಕಾರ, ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನತೆಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.ಬಿಜೆಪಿ ಸರ್ಕಾರ ತಾಲ್ಲೂಕಿಗೆ ತಾರತಮ್ಯ ಮಾಡಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪಾಲಾಕ್ಷಗೌಡ ಪಾಟೀಲ, ಪಕ್ಷದ ಎಲ್ಲರ ಸಹಕಾರ ಪಡೆದು ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ತಿಳಿಸಿದರು.ಪಕ್ಷದ ವೀಕ್ಷಕರಾದ ನಾಗೇಂದ್ರ ಕಡಕೋಳ, ಮಾಲತೇಶ ಸೊಪ್ಪಿನ, ತಾ.ಪಂ. ಅಧ್ಯಕ್ಷ ಶಿವಣ್ಣ ಗಡಿಯಣ್ಣನವರ, ಉಪಾಧ್ಯಕ್ಷೆ ನಿರ್ಮಲಾ ಗುಬ್ಬಿ, ಎಂ.ಎಚ್.ಪುಟ್ಟಪ್ಪಗೌಡ್ರ, ಶಂಕ್ರಗೌಡ ಚನ್ನಗೌಡ್ರ, ಹನುಮಂತಪ್ಪ ಹೊಸಳ್ಳಿ, ಬಸವರಾಜ ಬೇವಿನಹಳ್ಳಿ, ಸುಜಾತಾ ಕೊಟಗಿಮನಿ, ಶಾಂತಮ್ಮ ಹಾದಿಮನಿ, ಪಾರ್ವತಿ, ಲಿಂಗರಾಜ ಚಪ್ಪರದಹಳ್ಳಿ, ಗಂಗಾಧರ ಮಲೇಬೆನ್ನೂರ, ಬಸನಗೌಡ ಕಳ್ಳೇರ ವೇದಿಕೆಯಲ್ಲಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry