ಭಾನುವಾರ, ಜೂನ್ 13, 2021
25 °C

ಬಿಜೆಪಿಯಲ್ಲಿ ಬಂಡಾಯದ ಕಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರ ಪ್ರದೇಶದ ಬಹು ನಿರೀಕ್ಷಿತ ಬಿಜೆಪಿ ಅಭ್ಯರ್ಥಿ ಪಟ್ಟಿ ಶನಿವಾರ ಬಿಡುಗಡೆಯಾಗಿದ್ದು ಪಕ್ಷದಲ್ಲಿ ಬಂಡಾ­ಯಕ್ಕೆ ಕಾರಣವಾಗಿದೆ. ರಾಜ್ಯ ಘಟಕದ ಮಾಜಿ ಅಧ್ಯಕ್ಷರು ಸೇರಿದಂತೆ  ಹಲವು ಹಿರಿಯ ನಾಯಕರು ಅಭ್ಯರ್ಥಿ ಆಯ್ಕೆ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ತಮ್ಮ ತವರು ಜಿಲ್ಲೆ ದಿಯೋರಿಯಾ­ದಿಂದ ಟಿಕೆಟ್‌ ನಿರಾಕರಿಸುವ ಮೂಲಕ ಪಕ್ಷ ತನಗೆ ಅನ್ಯಾಯ ಮಾಡಿದೆ ಎಂದು ಉತ್ತರ ಪ್ರದೇಶ ಬಿಜೆಪಿ ಮಾಜಿ ಅಧ್ಯಕ್ಷ ಸೂರ್ಯ ಪ್ರತಾಪ್‌ ಶಾಹಿ ಹೇಳಿದ್ದಾರೆ. ಇಲ್ಲಿ ರಾಜ್ಯದ ಮಾಜಿ ಸಚಿವ ಕಲ್‌ರಾಜ್‌ ಮಿಶ್ರಾ ಅವರನ್ನು ಕಣಕ್ಕಿಳಿಸಲಾಗಿದೆ.ಲಖನೌದಿಂದ ಬಿಜೆಪಿ ಅಧ್ಯಕ್ಷ ರಾಜನಾಥ ಸಿಂಗ್‌ ಅವರಿಗೆ ಟಿಕೆಟ್‌ ನೀಡಿರುವುದು ಹಾಲಿ ಬಿಜೆಪಿ ಸಂಸದ ಲಾಲ್‌ಜಿ ಟಂಡನ್‌ ಅವರ ಬೇಸರಕ್ಕೆ ಕಾರಣವಾಗಿದೆ. ಆದರೆ ಅವರು ಬಹಿರಂಗವಾಗಿ ಅತೃಪ್ತಿ ತೋಡಿಕೊಳ್ಳ­ದಿರಲು ನಿರ್ಧರಿಸಿದ್ದಾರೆ.‘ಯಾರಿಗೆ ಟಿಕೆಟ್‌ ನೀಡಬೇಕು ಎಂಬುದು ಪಕ್ಷದ ವಿವೇಚನೆಗೆ ಬಿಟ್ಟ ವಿಚಾರ. ಆದರೆ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗಣನೆಗೆ ತೆಗೆದುಕೊಳ್ಳ­ಬೇಕು’ ಎಂದು ಶಾಹಿ ಅವರು ಅಭಿಪ್ರಾಯಪಟ್ಟಿದ್ದಾರೆ.ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳನ್ನು ಶಾಹಿ ನಿರಾಕರಿಸಿದ್ದಾರೆ. ಆದರೆ ದಿಯೋರಿಯಾದ ಜನರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.ದಿಯೋರಿಯಾದಲ್ಲಿ ಶಾಹಿ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ರಾಜನಾಥ ಸಿಂಗ್‌ ಪ್ರತಿಕೃತಿ ದಹಿಸಿ, ಪಕ್ಷದ ವಿರುದ್ಧ ಘೋಷಣೆ ಕೂಗಿದ್ದಾರೆ.

ಟಂಡನ್‌ ಅವರಿಗೆ ಟಿಕೆಟ್‌ ನೀಡದಿ­ರುವುದು ಅವರ ಬೆಂಬಲಿಗರ ಅತೃಪ್ತಿಗೆ ಕಾರಣವಾಗಿದೆ. ಆದರೆ ಟಂಡನ್‌ ‘ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಹಾಗಾಗಿ ಪಕ್ಷದ ಗೆಲುವಿಗೆ ಕೆಲಸ ಮಾಡುತ್ತೇನೆ’ ಎಂದು ಹೇಳಿದ್ದಾರೆ. ಆದರೆ ಟಂಡನ್‌ ಅತೃಪ್ತರಾಗಿರುವುದು ಸ್ಪಷ್ಟವಾಗಿದೆ. ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ ಎಂದು ಟಂಡನ್‌ ಬೆಂಬಲಿಗರು ಹೇಳಿದ್ದಾರೆ.ಉನ್ನಾವೊ ಕ್ಷೇತ್ರದಿಂದ ಹರಿಸಾಕ್ಷಿ ಮಹಾರಾಜ್‌ ಅವರಿಗೆ ಟಿಕೆಟ್‌ ನೀಡಿರುವುದೂ ಅತೃಪ್ತಿ ಸೃಷ್ಟಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.