ಬಿಜೆಪಿಯಿಂದ ಕಾಂಗ್ರೆಸ್ ಹಠಾವೋ ಅಭಿಯಾನ

7

ಬಿಜೆಪಿಯಿಂದ ಕಾಂಗ್ರೆಸ್ ಹಠಾವೋ ಅಭಿಯಾನ

Published:
Updated:

ವಿಜಾಪುರ: ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದಿಂದ `ಕಾಂಗ್ರೆಸ್ ಹಠಾವೋ; ದೇಶ್ ಬಚಾವೋ~ ಅಭಿಯಾನವನ್ನು ಇದೇ 20ರಿಂದ ತಿಂಗಳ ಕಾಲ ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ವಿ.ಸುನೀಲ್‌ಕುಮಾರ ಹೇಳಿದರು.ಇದೇ 20ರಂದು ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಬೃಹತ್ ಸಮಾ ವೇಶ ನಡೆಸುವ ಮೂಲಕ ಈ ಅಭಿ ಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿ ಯಲ್ಲಿ ತಿಳಿಸಿದರು.

ಅಕ್ಟೋಬರ್ 20ರಿಂದ ನವೆಂಬರ್ 20ರ ವರೆಗೆ ಈ ಅಭಿಯಾನ ನಡೆಯ ಲಿದೆ. ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕ ಸಭೆ, ಪ್ರತಿಭಟನೆ ನಡೆಸಲಾಗುವುದು ಎಂದರು.ಕೇಂದ್ರ ಸರ್ಕಾರ ರಾಷ್ಟ್ರೀಯತೆಯನ್ನೇ ಮರೆತಿದೆ. ಅಸ್ಸಾಂನಲ್ಲಿ ನಡೆಯುತ್ತಿರುವ ಗಲಭೆಗೆ ಬಾಂಗ್ಲಾ ದೇಶದ ಅಕ್ರಮ ನುಸುಳುಕೋರರೇ ಕಾರಣ. ಆದರೂ, ಅಕ್ರಮ ನುಸುಳುವಿಕೆಯನ್ನು ತಡೆದಿಲ್ಲ. ಸಂಸತ್ ಮೇಲೆ ದಾಳಿ ನಡೆಸಿದ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿಲ್ಲ. ಕಾಶ್ಮೀರದ ಪ್ರತ್ಯೇಕತಾವಾದಿಗಳಿಗೆ ಕಡಿವಾಣ ಹಾಕಿಲ್ಲ ಎಂದು ದೂರಿದರು.ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಗರಣಗಳ ಸರಮಾಲೆಯೇ ನಡೆದಿದೆ. ಕಲ್ಲಿದ್ದಲು, ಐಪಿಎಲ್ ಕ್ರಿಕೆಟ್, ಎಲ್‌ಐಸಿ ಹೌಸಿಂಗ್, ಇಸ್ರೋ, 2ಜಿ ಸ್ಪೆಕ್ಟ್ರಂ, ಕಾಮನ್‌ವೆಲ್ತ್, ಆದರ್ಶ ಸೊಸೈಟಿ... ಹೀಗೆ ಕೇಂದ್ರ ಸರ್ಕಾರದ ಹಗರಣಗಳ ದೊಡ್ಡ ಪಟ್ಟಿಯೇ ಇದೆ ಎಂದರು.ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅನುಮತಿ ನೀಡುವ ಮೂಲಕ ಕೇಂದ್ರ ಸರ್ಕಾರ ದೇಶದ 4 ಕೋಟಿ  ಚಿಲ್ಲರೆ ಮಾರಾಟಗಾರರ ಬಾಳನ್ನು ಮಸು ಕಾಗಿಸಿದೆ. ವಿದೇಶಿ ಬಂಡವಾಳ ಹರಿದು ಬರುತ್ತದೆ ಎಂಬುದು ಕೇವಲ ಭ್ರಮೆ ಎಂದು ಟೀಕಿಸಿದರು. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ.

 

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸುವ ಜೊತೆಗೆ ರಿಯಾಯಿತಿ ದರದ ಅಡುಗೆ ಅನಿಲದ ಸಿಲಿಂಡರ್‌ಗಳ ಬಳಕೆಗೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಈ ಎಲ್ಲ ಅಂಶಗಳ ಕುರಿತು ಅಭಿಯಾನದಲ್ಲಿ ಜನತೆಗೆ ಮನವರಿಕೆ ಮಾಡಿಕೊಡ ಲಾಗುವುದು ಎಂದು ಸುನೀಲ್‌ಕುಮಾರ ಹೇಳಿದರು.`ಯಡಿಯೂರಪ್ಪ ಸದ್ಯ ಬಿಜೆಪಿಯಲ್ಲಿಯೇ ಇದ್ದಾರೆ. ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುತ್ತೇವೆ~ ಎಂದಷ್ಟೇ ಅವರು ಪ್ರತಿಕ್ರಿಯಿಸಿದರು.ಶಾಸಕ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಕವಟಗಿ, ಬಿಡಿಎ ಅಧ್ಯಕ್ಷ ಭೀಮಾಶಂಕರ ಹದನೂರ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ರಾಜುಗೌಡ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry