ಮಂಗಳವಾರ, ಏಪ್ರಿಲ್ 20, 2021
24 °C

ಬಿಜೆಪಿಯಿಂದ ದುರಾಡಳಿತ: ಕಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ರಾಜ್ಯ ಸರ್ಕಾರ ಅತಿ ಭ್ರಷ್ಟತನದಿಂದ ಕೂಡಿದ್ದು ಜನತೆ ಮುಂಬರುವ ದಿವಸಗಳಲ್ಲಿ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ ಎಂ. ಮಹಾದೇವ್ ಬುಧವಾರ ಹೇಳಿದರು. ಪಟ್ಟಣದ ಸೋಮೇಶ್ವರ ವಿದ್ಯಾರ್ಥಿ ನಿಲಯದಲ್ಲಿ ಜನತಾ ದಳ (ಎಸ್) ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿಕೊಳ್ಳುವಲ್ಲಿ ಮುಖ್ಯಮಂತ್ರಿ ಯಶಸ್ವಿಯಾಗಿದ್ದಾರೆ, ಅಭಿವೃದ್ಧಿ ಕೆಲಸಗಳಿಗೆ ಮಾತ್ರ ಹಣದ ಕೊರತೆ ಈ ಸರ್ಕಾರದಲ್ಲಿದೆ ಎಂದು ವ್ಯಂಗ್ಯವಾಡಿದರು.ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಕೇವಲ 18 ತಿಂಗಳ ಆಳ್ವಿಕೆಯಲ್ಲಿ ಅಭಿವೃದ್ಧಿ ಕಾರ್ಯಮಾಡಿ ಮನೆ ಮಾತಾಗಿದ್ದಾರೆ. ಈಗಲೂ ಕುಮಾರಸ್ವಾಮಿ ಸರ್ಕಾ ರವನ್ನು ರಾಜ್ಯದ ಜನತೆ ಸ್ಮರಿಸಿ ಕೊಳ್ಳು ತ್ತಾರೆ. ಅವರನ್ನು ಮುಖ್ಯಮಂತ್ರಿ ಗಾದಿಗೆ ತರಲು ಪಕ್ಷದ ಎಲ್ಲರೂ ಶ್ರಮಿಸಬೇಕೆಂದು ಮನವಿ ಮಾಡಿದರು. ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಸಿದ್ಧರಾಮಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲ್ಲೂಕಿನಾದ್ಯಂತ ಜನತಾ ದಳ (ಎಸ್) ಕಾರ್ಯಕರ್ತರು ಉತ್ತಮ ಸಂಘಟನೆಯಲ್ಲಿ ತೊಡಗಿ ಕೊಳ್ಳ ಬೇಕು ಇದರಿಂದ ಮುಂಬರುವ ಚುನಾವಣೆಗಳಲ್ಲಿ ಜಯಗಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಚಾಮರಾಜನಗರ ಜಿಲ್ಲಾಧ್ಯಕ್ಷ ಪಂಚಾಕ್ಷರಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ಬಸವಣ್ಣ, ದೊರೆಸ್ವಾಮಿ, ನಿಶಾತ್ ಉಲ್ಲಾ, ಗೋವಿಂದಶೆಟ್ಟಿ, ಆಲೂರು ಮಲ್ಲು, ಕಳಲೆ ಕೇಶವಮೂರ್ತಿ, ಎಂ.ಎನ್. ನಾಗೇಂದ್ರ, ಅಣ್ಣೂರುಕೇರಿ ದೊಡ್ಡಮಾದಶೆಟ್ಟಿ, ಸಿದ್ಧರಾಜು, ಮಹೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ದುಂಡಮ್ಮ, ದ್ರಾಕ್ಷಾಯಿಣಮ್ಮ ಮುಂತಾದವರು ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.