ಬಿಜೆಪಿಯಿಂದ ರೈತರಿಗೆ ವಂಚನೆ

7

ಬಿಜೆಪಿಯಿಂದ ರೈತರಿಗೆ ವಂಚನೆ

Published:
Updated:

ಹೊಸಕೋಟೆ: ರೈತರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ರೈತರಿಗೇ ವಿದ್ಯುತ್ ಕೊಡದೆ ವಂಚಿಸುತ್ತಿದೆ ಎಂದು ಮಾಜಿ ಸಚಿವ ಎನ್. ಚಿಕ್ಕೇಗೌಡ ಟೀಕಿಸಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ವಿದ್ಯುತ್ ಉತ್ಪಾದನೆ ಬಗ್ಗೆ ಯಾವುದೇ ಯೋಜನೆ ರೂಪಿಸಿದೆ ಇರುವುದೇ ಇಂದಿನ ವಿದ್ಯುತ್ ಸಮಸ್ಯೆಗೆ ಕಾರಣ~ ಎಂದು ದೂರಿದರು.`ಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರು ವಿದ್ಯುತ್ ಸಮಸ್ಯೆ ಬಗ್ಗೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿರುವುದು ವಿಪರ್ಯಾಸದ ಸಂಗತಿ~ ಎಂದ ಅವರು, `ಗ್ರಾಮೀಣ ಪ್ರದೇಶದ ಕೃಷಿಕರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೀಡದೆ ನಗರ ಪ್ರದೇಶದ ವಾಸಿಗಳಿಗೆ ಹೆಚ್ಚಿನ ಪ್ರಮಾಣದ ವಿದ್ಯುತ್ ಕೊಡಲು ಹೊರಟಿರುವುದು ಖಂಡನೀಯ~ ಎಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry