ಶನಿವಾರ, ನವೆಂಬರ್ 23, 2019
18 °C

ಬಿಜೆಪಿಯ ಇಬ್ಬರು ಸಂಸದರ ಅಮಾನತು

Published:
Updated:

ಬೆಂಗಳೂರು (ಪಿಟಿಐ):  ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಬಿಜೆಪಿ ಸಂಸದರನ್ನು ಸೋಮವಾರ ಅಮಾನತುಗೊಳಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಮೂಲಗಳು ತಿಳಿಸಿವೆಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘವೇಂದ್ರ ಹಾಗೂ ಹಾವೇರಿ ಸಂಸದ ಶಿವಕುಮಾರ್ ಉದಾಸಿ ಅವರನ್ನು  ಪಕ್ಷದಿಂದ ಅಮಾನತು ಮಾಡಲಾಗಿದೆ.ರಾಘವೇಂದ್ರ ಮತ್ತು ಶಿವಕುಮಾರ್ ಉದಾಸಿ ಅವರು ಕೆಜೆಪಿ ಪಕ್ಷದ ಪರವಾಗಿ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಪ್ರತಿಕ್ರಿಯಿಸಿ (+)