ಬಿಜೆಪಿ ಅಧ್ಯಕ್ಷರಾಗಿ ಡಿವಿಎಸ್ ನೇಮಕ?

7

ಬಿಜೆಪಿ ಅಧ್ಯಕ್ಷರಾಗಿ ಡಿವಿಎಸ್ ನೇಮಕ?

Published:
Updated:

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಳ್ಳುವ ಸಾಧ್ಯತೆ ಇದೆ. ಶನಿವಾರ ದೆಹಲಿಯಲ್ಲಿ ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.ಮುಖ್ಯಮಂತ್ರಿ ಸ್ಥಾನಕ್ಕೆ ಸದಾನಂದಗೌಡ ರಾಜೀನಾಮೆ ನೀಡಿದಾಗಲೇ, ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲು ಹೈಕಮಾಂಡ್ ಒಲವು ತೋರಿತ್ತು. ಆದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈಕಮಾಂಡ್ ತೀರ್ಮಾನಿಸಿತ್ತು. ತಮ್ಮನ್ನು ಅಧ್ಯಕ್ಷ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಈಶ್ವರಪ್ಪ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ. ಹೀಗಾಗಿ ಸಭೆಯಲ್ಲಿ ನೂತನ ಅಧ್ಯಕ್ಷರ ನೇಮಕ  ಚರ್ಚೆಗೆ  ಬರಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry