ಹುಮನಾಬಾದ್: ತಾಲ್ಲೂಕು ಬಿಜೆಪಿ ಸೋಮವಾರ ಹಮ್ಮಿಕೊಂಡಿದ್ದ ಮಹಾ ಅಭಿಯಾನಕ್ಕೆ ಮಾಜಿ ಶಾಸಕ ಸುಭಾಷ ಕಲ್ಲೂರ್ ಚಾಲನೆ ನೀಡಿದರು.

ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಪ್ರತಿಯೊಬ್ಬರೂ ಬಿಜೆಪಿ ಸದಸ್ಯತ್ವ ಪಡೆಯುವ ಮೂಲಕ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ರಾಷ್ಟ್ರ ರಥ ಕೊಂಡೊ ಯ್ಯುವಲ್ಲಿ ಭಾಗಿಯಾಗಬೇಕು ಎಂದು ಮಕಲ್ಲೂರ್ ಸಲಹೆ ನೀಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಜನಪರ ಕಾರ್ಯಗಳ ಕುರಿತು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡುವುದು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಕರ್ತವ್ಯ. ಪಕ್ಷ ಸಂಘಟನೆಯ ಇಂತಹ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿಭಾಯಿಸಬೇಕು ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಮಂಠಾಳಕರ್, ರಾಜ್ಯ ಕಾರ್ಯಕಾರಿಣಿ ಪದ್ಮಾಕರ್ ಪಾಟೀಲ ಹೇಳಿದರು. ತಾಲ್ಲೂಕು ಪಂಚಾಯಿತಿ ಸದಸ್ಯ ಗಜೇಂದ್ರ ಕನಕಟಕರ್, ಪಕ್ಷದ ತಾಲ್ಲೂಕು ಅಧ್ಯಕ್ಷ ಸೂರ್ಯಕಾಂತ ಮಠಪತಿ, ಉಪಾಧ್ಯಕ್ಷ ಝೆರೆಪ್ಪ ಮಣಿಗಿರೆ, ಪಕ್ಷದ ಮುಖಂಡರಾದ ವಿಜಯಕುಮಾರ ದುರ್ಗದ್ ಮಾತನಾಡಿದರು. ಪಕ್ಷದ ಹಿರಿಯ ಕಾರ್ಯಕರ್ತರಾದ ಶಿವಪುತ್ರಪ್ಪ ಸ್ವಾಮಿ, ಪ್ರಕಾಶ ಸುವರ್ಣಕರ್, ಗಿರೀಶ ಪಾಟೀಲ,ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.