ಗುರುವಾರ , ಮೇ 13, 2021
16 °C

ಬಿಜೆಪಿ ಇಬ್ಬಂದಿತನ ದೇಶಪಾಂಡೆ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭ್ರಷ್ಟಾಚಾರ ವಿರೋಧಿಸುವ ನೆಪದಲ್ಲಿ ಗಾಂಧಿವಾದಿ ಅಣ್ಣಾ ಹಜಾರೆ ಅವರನ್ನು ಬೆಂಬಲಿಸುವ ಬಿಜೆಪಿ, ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿಯಲ್ಲಿ ದೋಷಾರೋಪಕ್ಕೆ ಒಳಗಾಗಿರುವ ಜಿ. ಜನಾರ್ದನ ರೆಡ್ಡಿ ಬಂಧನವನ್ನು ವಿರೋಧಿಸುತ್ತಿರುವುದು ಇಬ್ಬಂದಿತನದ ಪ್ರದರ್ಶನವಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಲೇವಡಿ ಮಾಡಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, `ರೆಡ್ಡಿ ಅವರನ್ನು ಬಂಧಿಸಿರುವ ಹಿಂದೆ ಕಾಂಗ್ರೆಸ್‌ನ ಕೈವಾಡ ಇಲ್ಲ. ರೆಡ್ಡಿ ಸಹೋದರರ ಕುರಿತು ಆಂಧ್ರದಲ್ಲಿ 2009ರಲ್ಲೇ ತನಿಖೆ ನಡೆದು ಪ್ರಥಮ ಮಾಹಿತಿ ವರದಿ ದಾಖಲಾಗಿದೆ~ ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.