ಮಂಗಳವಾರ, ನವೆಂಬರ್ 12, 2019
28 °C

ಬಿಜೆಪಿ ಕಚೇರಿ ಬಳಿ ಸ್ಫೋಟ: ಮೂವರ ಬಂಧನ

Published:
Updated:

ಚೆನ್ನೈ (ಪಿಟಿಐ): ಮಲ್ಲೇಶ್ವರದಲ್ಲಿ ಬಿಜೆಪಿ ಕಚೇರಿ ಬಳಿ ಕಳೆದವಾರ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ಸೋಮವಾರ ತಡರಾತ್ರಿ ಮೂವರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.ಮೋಹಿದೀನ್ ಮತ್ತು ಬಶೀರ್ ಎಂಬ ಆರೋಪಿಗಳನ್ನು ತಿರುನಲ್ವೇಲಿಯಲ್ಲಿ ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿಯನ್ನು ಮಧುರೈನಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಬಂಧಿತ ಆರೋಪಿಗಳನ್ನು ಬೆಂಗಳೂರಿಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)