ಶನಿವಾರ, ಜೂನ್ 12, 2021
28 °C

ಬಿಜೆಪಿ ಕಳೆಗುಂದಿದೆ: ಶಿವರಾಜ ತಂಗಡಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಧನೂರು: ಬಿಜೆಪಿ ಶಕ್ತಿಯನ್ನು ಕಳೆದುಕೊಂಡಿದೆ ಎನ್ನುವುದಕ್ಕೆ  ಮೋದಿ ಅಲೆ ಹುಟ್ಟುಹಾಕಲು ಹವಣಿಸುತ್ತಿ­ರುವುದೇ ಸಾಕ್ಷಿ ಎಂದು ಸಣ್ಣ ನೀರಾವರಿ ಹಾಗೂ ಕೊಪ್ಪಳ ಜಿಲ್ಲೆ ಉಸ್ತುವಾರಿ ಸಚಿವ ಶಿವರಾಜ. ಎಸ್‌. ತಂಗಡಗಿ ಹೇಳಿದರು.ಅವರು ಶುಕ್ರವಾರ ನಗರದ ಶಾದಿಮಹಲ್‌ನಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ರಾಜ್ಯದ ಜನತೆ ಬಿಜೆಪಿ ಸರ್ಕಾರ ನಡೆಸಿದ ಭ್ರಷ್ಟಾಚಾರಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಿದ್ದಾರೆ. ಲೋಕಸಭಾ ಚುನಾವಣೆ­ಯಲ್ಲಿ  ಕೈ ಹಿಡಿಯಲಿದ್ದಾರೆ ಎನ್ನುವ ಭರವಸೆ ಇದೆ. ಬಿಜೆಪಿಗೆ ಮೋದಿ ಅಲೆ ನಷ್ಟವೇ ಹೊರತು ಲಾಭ ಅಲ್ಲ. ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ಕೇಂದ್ರದ ಯುಪಿಎ ಸರ್ಕಾರ ಹ್ಯಾಟ್ರಿಕ್‌ ಬಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಮುಂದಿನ ಪ್ರಧಾನಿ ರಾಹುಲ್‌ ಗಾಂಧಿ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕಾರ್ಯಕರ್ತರು ಸಮರೋಪಾದಿಯಲ್ಲಿ ಅಭ್ಯರ್ಥಿಪರ ಕೆಲಸ ಮಾಡುವಂತೆ ಕಾರ್ಯಕರ್ತರಲ್ಲಿ ವಿನಂತಿಸಿದರು.ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ ಕಾರ್ಯಕರ್ತರು ಗ್ರಾಮೀಣ ಮಟ್ಟದಿಂದ ಪಕ್ಷವನ್ನು ಸಂಘಟಿಸಿ ಅಭ್ಯರ್ಥಿ ಬಸವರಾಜ ಹಿಟ್ನಾಳ ಅವರ ಗೆಲುವಿಗೆ ಶ್ರಮಿಸಬೇಕು. ಪಕ್ಷದ ಮುಖಂಡರೊಂದಿಗೆ ಸಮನ್ವಯ ಕಾಪಾಡಿಕೊಂಡು, ಕಾಂಗ್ರೆಸ್‌ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಯಪಡಿಸುತ್ತಾ ಮತ ಕೇಳುವಂತೆ ಸಲಹೆ ನೀಡಿದರು.ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್‌, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ನಗರಸಭೆ ಅಧ್ಯಕ್ಷ ಜಾಫರ್ ಜಾಗೀರದಾರ, ಮುಖಂಡರಾದ ಎಂ.ಕಾಳಿಂಗಪ್ಪ ವಕೀಲ, ಕಾಂಗ್ರೆಸ್‌ ನಗರ ಬ್ಲಾಕ್‌ ಘಟಕ ಅಧ್ಯಕ್ಷ  ಖಾಜಿಮಲಿಕ್‌, ಲಿಂಗರಾಜ್‌ ಪಾಟೀಲ್‌, ಶ್ರೀದೇವಿ ಶ್ರೀನಿವಾಸ ಮತ್ತಿತರರು ಪಾಲ್ಗೊಂಡಿದ್ದರು. ಗ್ರಾ.ಪಂ., ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾಯಿತ ಸದಸ್ಯರು ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.