ಗುರುವಾರ , ಏಪ್ರಿಲ್ 15, 2021
20 °C

ಬಿಜೆಪಿ-ಕಾಂಗ್ರೆಸ್ ಪ್ರತ್ಯಾರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ):  `ಪೂರ್ತಿ~ ಸಮೂಹದಲ್ಲಿ ಅನುಮಾನಾಸ್ಪದ ಹೂಡಿಕೆಗೆ ಸಂಬಂಧಿಸಿ ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿ ವಿರುದ್ಧ ಆರೋಪ ಮಾಡುತ್ತಿರುವ ಕೇಂದ್ರದ ಆಡಳಿತಾರೂಢ ಕಾಂಗ್ರೆಸ್‌ನ ಬಾಯಿ ಮುಚ್ಚಿಸಲು ಬಿಜೆಪಿ ಇದೀಗ ವಾದ್ರಾ ಭೂ ಖರೀದಿ ಹಾಗೂ ಕಲ್ಲಿದ್ದಲು ಹಗರಣವನ್ನು ಅಸ್ತ್ರವನ್ನಾಗಿಸಿಕೊಂಡಿದೆ.



 `ಅಕ್ರಮ ಭೂ ಖರೀದಿ ಆರೋಪ ಎದುರಿಸುತ್ತಿರುವ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ? ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹರಗಣದಲ್ಲಿ ಪ್ರಧಾನಿ ವಿರುದ್ಧ ಏನು ಕ್ರಮ ತೆಗೆದುಕೊಂಡಿದ್ದೀರಿ?~ ಎಂದು ಸವಾಲು ಹಾಕಿದೆ.



`ವಾದ್ರಾ ಭೂ ಖರೀದಿ ವಿಷಯದಲ್ಲಿ ಕಾಂಗ್ರೆಸ್ ಪಕ್ಷವು ಮೌನ ವಹಿಸಿರುವುದು ಯಾಕೆ~ ಎಂದು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ. `ಕಲ್ಲಿದ್ದಲು ಹಗರಣದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಪಾತ್ರವೇನು? ಯಾಕೆ ಇದನ್ನು ತನಿಖೆ ಮಾಡುತ್ತಿಲ್ಲ~ ಎಂದೂ ಅವರು ತಿರುಗೇಟು ನೀಡಿದ್ದಾರೆ.



ದಿಕ್ಕು ತಪ್ಪಿಸುವ ಹುನ್ನಾರ: ಬಿಜೆಪಿಯ ಸವಾಲಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, `ಗಡ್ಕರಿ ವಿರುದ್ಧದ ಆರೋಪ ಕುರಿತಂತೆ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿಯು ಹಳೆಯ ಆರೋಪಗಳನ್ನು ಪ್ರಸ್ತಾಪಿಸುತ್ತಿದೆ~ ಎಂದು ವ್ಯಂಗ್ಯವಾಡಿದೆ.



`ಬಿಜೆಪಿ ಒಡೆದ ಮನೆ. ಪಕ್ಷದ ಸದಸ್ಯರೆಲ್ಲ ಹತಾಶೆಯಿಂದ ಬಳಲುತ್ತಿದ್ದಾರೆ~ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವ ಮನೀಷ್ ತಿವಾರಿ ಟೀಕಿಸಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.