ಭಾನುವಾರ, ಜೂನ್ 20, 2021
21 °C

ಬಿಜೆಪಿ ಕಾರ್ಯಕರ್ತರ ಸಮಾವೇಶ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾನ್ವಿ: ಮಾರ್ಚ್‌ 24ರಂದು ಪಟ್ಟಣದ ಟಿಎಪಿಸಿಎಂಎಸ್‌ ಆವರಣದಲ್ಲಿ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಗಂಗಾಧರ ನಾಯಕ ಹಾಗೂ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ತಿಮ್ಮಾರೆಡ್ಡಿ ಭೋಗಾವತಿ ತಿಳಿಸಿದ್ದಾರೆ.ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಂಗಾಧರ ನಾಯಕ, ಈ ಕಾರ್ಯಕ್ರಮದಲ್ಲಿ  ವಿವಿಧ ಪಕ್ಷಗಳ  ಮುಖಂಡರು ಬಿಜೆಪಿಗೆ ಸೇರ್ಪಡೆಯಾಗುವರು. ಲೋಕಸಭೆಯ ಬಿಜೆಪಿ ಅಭ್ಯರ್ಥಿ ಕೆ.ಶಿವನಗೌಡ ನಾಯಕ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ವಿಧಾನ ಪರಿಷತ್‌ ಸದಸ್ಯ ಹಾಲಪ್ಪ ಆಚಾರ್‌ ಸೇರಿದಂತೆ ಹಲವು ಹಿರಿಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ತಿಳಿಸಿದರು.ಎಸ್‌.ತಿಮ್ಮಾರೆಡ್ಡಿ ಭೋಗಾವತಿ ಮಾತನಾಡಿದರು. ಜಿಪಂ ಮಾಜಿ ಅಧ್ಯಕ್ಷ ದೊಡ್ಡಬಸಪ್ಪಗೌಡ ಭೋಗಾವತಿ, ಪುರಸಭೆಯ ಮಾಜಿ ಅಧ್ಯಕ್ಷ ಕೆ.ಬಸವಂತಪ್ಪ, ನಾಗರೆಡ್ಡೆಪ್ಪ ಬಾಗಲವಾಡ, ತಾಪಂ ಸದಸ್ಯ ರಾಜಾ ವಸಂತ ನಾಯಕ, ಮಲ್ಲನಗೌಡ ನಕ್ಕುಂದಿ ಸೇರಿದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳ ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಯಾಗುವರು ಎಂದು ತಿಳಿಸಿದರು.ಮಾ.26ರಂದು ಕೆ.ಶಿವನಗೌಡ ನಾಯಕ ತಮ್ಮ ನಾಮಪತ್ರ ಸಲ್ಲಿಸಲಿದ್ದು, ಆ ದಿನದಂದು ಸಿರವಾರದಲ್ಲಿಯೂ ಕೂಡ ಪಕ್ಷದ ವತಿಯಿಂದ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌.ತಿಮ್ಮಾರೆಡ್ಡಿ ಹೇಳಿದರು. ಜಿಪಂ ಸದಸ್ಯ ಗೋಪಾಲ ನಾಯಕ, ಸಿರವಾರ ಬ್ಲಾಕ್‌ ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ, ರುದ್ರಗೌಡ ಮದ್ಲಾಪುರ, ಶರಣಯ್ಯ ಸ್ವಾಮಿ, ಪ್ರಭು ಜೇಗರಕಲ್‌ ಮತ್ತಿತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.