ಬಿಜೆಪಿ ಕೇಂದ್ರ ಸಮಿತಿ ಸಭೆ: ಅಡ್ವಾಣಿ ಗೈರು
ನವದೆಹಲಿ (ಐಎಎನ್ಎಸ್): ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಅವರ ನಿವಾಸದಲ್ಲಿ ಬುಧವಾರ ಸಂಜೆ ಕರೆಯಲಾಗಿದ್ದ ಬಿಜೆಪಿ ಕೇಂದ್ರ ಸಮಿತಿ ಸಭೆಗೆ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಗೈರು ಹಾಜರಾಗಿದ್ದಾರೆ.
ಗಡ್ಕರಿ ಜತೆ ಭಿನ್ನಾಭಿಪ್ರಾಯ ಹೊಂದಿದ್ದ ಅಡ್ವಾಣಿ ಪೂರ್ವ ನಿಗದಿತ ಕಾರ್ಯಕ್ರಮದಂತೆ ತಮಿಳುನಾಡಿಗೆ ತೆರಳಿದ್ದಾರೆ. ಕೂಡುಂಕುಳಂ ಪರಮಾಣು ಸ್ಥಾವರ ಯೋಜನೆಗೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಳ್ಳಲು ಅಡ್ವಾಣಿ ತೆರಳಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.
ಈ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆ ಹಾಗೂ ಬೆಲೆ ಏರಿಕೆಗೆ ಸಂಬಂಧಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವ ಕುರಿತು ಚರ್ಚೆ ನಡೆಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.