ಬಿಜೆಪಿ ಕೋರ್‌ ಕಮಿಟಿ ಸಭೆ ಮುಂದಕ್ಕೆ

7

ಬಿಜೆಪಿ ಕೋರ್‌ ಕಮಿಟಿ ಸಭೆ ಮುಂದಕ್ಕೆ

Published:
Updated:

ಬೆಂಗಳೂರು: ಪ್ರಧಾನಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಘಟಕದಲ್ಲಿ ಗೊಂದಲ ಏರ್ಪಟ್ಟಿರುವ ಕಾರಣ ನಗರದಲ್ಲಿ ಬುಧವಾರ ನಡೆಯಬೇಕಿದ್ದ ಪಕ್ಷದ ಪ್ರಮುಖರ ಸಭೆಯನು್ನ (ಕೋರ್‌ ಕಮಿಟಿ) ಮುಂದೂಡಲಾಗಿದೆ.ಗುಜರಾತ್‌ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನು್ನ ಪ್ರಧಾನ ಮಂತ್ರಿ ಅಭ್ಯರ್ಥಿಯೆಂದು ಘೋಷಣೆ ಮಾಡುವ ವಿಷಯ ಇನ್ನೂ ಚರ್ಚೆ ಹಂತದಲ್ಲಿಯೇ ಇದೆ. ಈ ಕುರಿತು ಶುಕ್ರವಾರ ಅಧಿಕೃತ ಹೇಳಿಕೆ ಹೊರಬೀಳುವ ಸಾಧ್ಯತೆ ಇರುವ ಕಾರಣ ಸಭೆ ನಡೆಸಲು ಆಗಲಿಲ್ಲ ಎನ್ನಲಾಗಿದೆ.ಈ ನಡುವೆ ಪ್ರಮುಖರ ಸಭೆಯ ಸದಸ್ಯರಾಗಿರುವ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ­ಕುಮಾರ್‌ ಸೇರಿದಂತೆ ಇತರ ಮುಖಂಡರು ದೆಹಲಿಯಲ್ಲೇ ಉಳಿದಿರು­ವುದು ಕೂಡ ಸಭೆ ನಡೆಯದಿರಲು ಕಾರಣ ಎನ್ನಲಾಗಿದೆ.ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಮತ್ತು ಮೋದಿ ಭೇಟಿ ಕುರಿತು ಪ್ರಮುಖರ ಸಭೆಯಲ್ಲಿ ಚರ್ಚಿಸಬೇಕಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry