ಮಂಗಳವಾರ, ಜೂನ್ 22, 2021
28 °C

ಬಿಜೆಪಿ ಗೆಲುವಿಗೆ ಎಎಪಿ ಅಡ್ಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌ (ಐಎಎನ್‌ಎಸ್‌): ದೆಹಲಿಯಲ್ಲಿ ಯಶಸ್ವಿ­ಯಾಗಿರುವ ಆಮ್‌  ಆದ್ಮಿ ಪಕ್ಷ ಮುಂಬರುವ ಲೋಕಸಭೆ ಚುನಾವಣೆ­ಯಲ್ಲಿ ಬಿಜೆಪಿ ಗೆಲುವಿಗೆ ಮುಖ್ಯ ಅಡ್ಡಿಯಾಗಲಿದೆ ಎಂದು ಪಾಕಿಸ್ತಾನದ ದಿನಪತ್ರಿಕೆಯೊಂದು ಅಭಿಪ್ರಾಯಪಟ್ಟಿದೆ.ಭ್ರಷ್ಟಾಚಾರ ವಿರೋಧಿ ಹೋರಾಟದಿಂದ ಗುರುತಿಸಿಕೊಂಡಿರುವ ಆಮ್‌ ಆದ್ಮಿ ಪಕ್ಷ ನಗರ ಪ್ರದೇಶದ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಆದ್ದರಿಂದ ಇದು ಬಿಜೆಪಿ ಗೆಲುವಿಗೆ ತಡೆಯಾಗಬಹುದು ಎಂದು ಪಾಕಿಸ್ತಾನದ ಪ್ರಮುಖ ಪತ್ರಿಕೆ ‘ನ್ಯೂಸ್‌ ಇಂಟರ್‌ನ್ಯಾಷನಲ್‌’ ತನ್ನ ಸಂಪಾದಕೀಯದಲ್ಲಿ ಬರೆದಿದೆ.ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಕಾಂಗ್ರೆಸ್‌ ಚುನಾವಣೆಯಲ್ಲಿ ಸೋಲನ್ನು ಅನುಭವಿಸುವ ನಿರೀಕ್ಷೆ ಇದೆ ಎಂದು ಪತ್ರಿಕೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.