ಮಂಗಳವಾರ, ಜೂನ್ 22, 2021
23 °C

ಬಿಜೆಪಿ ಗೆಲುವು ನಿಶ್ಚಿತ: ಸಚಿವ ಕಾಗೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನರಸಿಂಹರಾಜಪುರ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಅವರ ಗೆಲುವು ನಿಶ್ಚಿತ ಎಂದು ಸಚಿವ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭವಿಷ್ಯ ನುಡಿದರು.



ಪಟ್ಟಣದ ಅಗ್ರಹಾರ ವ್ಯಾಪ್ತಿಯಲ್ಲಿ ಗುರುವಾರ ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪರ ಮನೆ ಮನೆಗೆ ತೆರಳಿ ಮತ ಯಾಚಿಸಿದ ಅವರು, ರಾಜ್ಯ ಸರ್ಕಾರದ ಸಾಧನೆ ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳ ಮೇಲೆ ಮತ ಯಾಚಿಸಲಾಗುತ್ತಿದೆ.

 

ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಹಿಂದೆ ಈ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದು, ಇದನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ ಎಂದರು.ಎಲ್ಲಾ ಕಾರ್ಯಕರ್ತರೂ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಕ್ಷೇತ್ರ ವ್ಯಾಪ್ತಿಯಲ್ಲಿನ ಸ್ಥಳೀಯ ಸಮಸ್ಯೆಗಳಿಗೆ ಹಿಂದೆ ಆಡಳಿತ ನಡೆಸಿದ ಸರ್ಕಾರಗಳು ಕಾರಣ ಎಂದರು.



ಕಳೆದ 4 ವರ್ಷಗಳಲ್ಲಿ ಬಿಜೆಪಿ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಸ್ಥಳೀಯ ಶಾಸಕರು ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿನ್ನು ಕೈಗೊಂಡಿದ್ದಾರೆ ಎಂದರು.ಎಲ್ಲಾ ಸಚಿವರು, ಶಾಸಕರು ಒಟ್ಟಾಗಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದೇವೆ. ಬಿಜೆಪಿ ಅಭ್ಯರ್ಥಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.



ಪಟ್ಟಣ ಪಂಚಾಯಿತಿ ಸದಸ್ಯರಾದ ಆರ್.ರಾಜಶೇಖರ್, ಬಿ.ಎಸ್.ಆಶೀಶ್ ಕುಮಾರ್, ಜಯರಾಮ, ಗುರುಮೂರ್ತಿ, ಹಿರಣ್ಣಯ್ಯ, ನಾಗರಾಜ್, ಗೋಪಾಲ ಕೃಷ್ಣ, ಶಿವಕುಮಾರ್,  ಸತೀಶ್, ಲಕ್ಷ್ಮಿನಾರಾಯಣ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.