ಬಿಜೆಪಿ ದುರಾಡಳಿತದಿಂದ ಜನತೆ ಕಂಗಾಲು

7

ಬಿಜೆಪಿ ದುರಾಡಳಿತದಿಂದ ಜನತೆ ಕಂಗಾಲು

Published:
Updated:

ಸಿರವಾರ (ಕವಿತಾಳ): ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸಿ ರಾಜ್ಯದ ಘನತೆಗೆ ಅಪಮಾನ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಜಾತಿ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರ್ಕಾರದಿಂದ ಅಭಿವೃದ್ದಿ ಅಸಾಧ್ಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ಎಸ್.ಬೋಸರಾಜು ಹೇಳಿದರು.ಸಮೀಪದ ಹರವಿ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್‌ಗೆ ಬನ್ನಿ ಬದಲಾವಣೆ ತನ್ನಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮತದಾರರು ಎಚ್ಚೆತ್ತುಕೊಳ್ಳದ ಹೊರತು ರಾಜ್ಯದಲ್ಲಿ ಅಭಿವೃದ್ದಿ ಮರೀಚಿಕೆ ಎಂದರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿವಂತೆ ಮನವಿ ಮಾಡಿದರು.ಶಾಸಕ ಜಿ.ಹಂಪಯ್ಯ ನಾಯಕ ಮಾತನಾಡಿ, ಜನಪರ ಚಿಂತನೆ ಹೊಂದಿದ ಕಾಂಗ್ರೆಸ್ ಪಕ್ಷದಿಂದ ಮಾತ್ರ ಅಭಿವೃದ್ದಿ ನಿರೀಕ್ಷಿಸಲು ಸಾಧ್ಯ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವೈಖರಿಯಿಂದ ರಾಜ್ಯದ ಜನತೆ ಕಂಗಾಲಾಗಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಅಸ್ಲಾಂಪಾಶಾ, ಗಂಗಣ್ಣ ನಾಯಕ, ಹನುಮೇಶ ಮದ್ಲಾಪುರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಡ್ಡೆಪ್ಪ ಬಾಗಲವಾಡ, ಅಯ್ಯನಗೌಡ ಜಂಬಲದಿನ್ನಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪಾರ್ವತಿ, ಎಪಿಎಂಸಿ ಅಧ್ಯಕ್ಷ ಚಂದ್ರಶೇಖರ ಕುರ್ಡಿ, ಮಾನ್ವಿ ಪುರಸಭೆ ಅಧ್ಯಕ್ಷ ಸಬ್ಜಲಿಸಾಬ್, ಎಂ.ಈರಣ್ಣ ಮತ್ತು ಯುವ ಘಟಕದ ತಾಲ್ಲೂಕು ಅಧ್ಯಕ್ಷ ಅರುಣಚಂದಾ ಇತರರು ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry