ಸೋಮವಾರ, ಜೂನ್ 14, 2021
26 °C

ಬಿಜೆಪಿ ನಾಯಕರ ಕಾರು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೆಸರಘಟ್ಟ: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಡಿ.ವಿ ಸದಾನಂದಗೌಡ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರಾಜು ಅವರ ಕಾರುಗಳನ್ನು ಚುನಾವಣಾಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡಿದ್ದಾರೆ.ದಾಸರಹಳ್ಳಿಯ ಪೈಪ್‌ಲೈನ್‌ ರಸ್ತೆ­ಯಲ್ಲಿರುವ ಬಿಜೆಪಿ ಪಕ್ಷದ ಕಾರ್ಯಾ­ಲಯದಲ್ಲಿ ಚುನಾವಣಾ ಚುಟುವಟಿಕೆ­ಯಲ್ಲಿ ಪಾಲ್ಗೊಳ್ಳಲು ಶಾಸಕರು ಆಗಮಿಸಿದ್ದರು. ಆದರೆ ಕಾರುಗಳಿಗೆ ಚುನಾವಣಾಧಿಕಾರಿಗಳಿಂದ ಅನುಮತಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.