ಬಿಜೆಪಿ ನೇತೃತ್ವದಲ್ಲಿ ಅಹೋರಾತ್ರಿ ಧರಣಿ

ಶನಿವಾರ, ಜೂಲೈ 20, 2019
23 °C

ಬಿಜೆಪಿ ನೇತೃತ್ವದಲ್ಲಿ ಅಹೋರಾತ್ರಿ ಧರಣಿ

Published:
Updated:

ರಾಯಚೂರು: ವಿದೇಶದಲ್ಲಿರುವ ಕಪ್ಪುಹಣವನ್ನು ಭಾರತಕ್ಕೆ ವಾಪಸ್ ತರಬೇಕು ಎಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಯೋಗಗುರು ಬಾಬಾ ರಾಮದೇವ ಅವರನ್ನು ಕೇಂದ್ರ ಸರ್ಕಾರ ಬಂಧಿಸಿರುವುದನ್ನು ಖಂಡಿಸಿ ರಾಯಚೂರಿನಲ್ಲಿ ಭಾನುವಾರ ಸಂಜೆ ಬಿಜೆಪಿ ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸಿದರು.ಬಾಬಾ ರಾಮದೇವ ಅವರ ವಿರುದ್ಧ ಕೇಂದ್ರ ಸರ್ಕಾರ ನಡೆದುಕೊಂಡಿರುವುದು ರೀತಿ ಖಂಡನೀಯ. ಕೇಂದ್ರ ಸರ್ಕಾರವು ಕೂಡಲೇ ದೇಶದ ಜನತೆಗೆ ಕ್ಷೇಮ ಕೋರಬೇಕು ಎಂದು ಆಗ್ರಹಿಸಿದೆ.ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಸಾದು ಸಂತ ಮಹಿಳೆಯ ದೌರ್ಜನ್ಯದಿಂದ ನಡೆದುಕೊಂಡಿರುವುದು ಖಂಡನೀಯ. ಬಾಬಾ ರಾಮದೇವ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದೆ.ವಿಧಾನ ಪರಿಷತ್ ಸದಸ್ಯ ಎನ್.ಶಂಕರಪ್ಪ ವಕೀಲ, ಮಾಜಿ ಶಾಸಕ ಎ.ಪಾಪಾರೆಡ್ಡಿ, ಕಾಡಾ ಅಧ್ಯಕ್ಷ ಬಸವನಗೌಡ ಬ್ಯಾಗವಾಟ, ಆರ್‌ಡಿಎ ಅಧ್ಯಕ್ಷ ಜಗನ್ನಾಥ ಕುಲಕರ್ಣಿ, ಜಾಡಲದಿನ್ನಿ ಶರಣಪ್ಪಗೌಡ, ನಗರ ಘಟಕದ ಅಧ್ಯಕ್ಷ ಜಿ.ಶೇಖರರೆಡ್ಡಿ,ಗಿರೀಶ ಕನಕವೀಡು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಂಡೇಶ ವಲ್ಕಂದಿನ್ನಿ, ತ್ರಿವಿಕ್ರಮಜೋಶಿ ಸೇರಿದಂತೆ ಅನೇಕ ಕಾರ್ಯಕರ್ತರು ಧರಣಿಯಲ್ಲಿ ಪಾಲ್ಗೊಂಡಿದ್ದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry