ಬಿಜೆಪಿ ಬಂಡಾಯ ಅಭ್ಯರ್ಥಿಗೆ ಜಯ

7

ಬಿಜೆಪಿ ಬಂಡಾಯ ಅಭ್ಯರ್ಥಿಗೆ ಜಯ

Published:
Updated:

ಬೆಂಗಳೂರು: ರಾಜ್ಯ ಕೃಷಿ ಮಾರಾಟ ಮಹಾಮಂಡಲದ ಉಪಾಧ್ಯಕ್ಷರಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ಪಿ.ಎಸ್. ವೀರೇಂದ್ರ ಪ್ರಸಾದ್ ಆಯ್ಕೆಯಾಗಿದ್ದಾರೆ.ಒಟ್ಟು 27 ಸದಸ್ಯ ಬಲವುಳ್ಳ ಮಹಾಮಂಡಲದಲ್ಲಿ ಬಿಜೆಪಿಯ 22 ಸದಸ್ಯರಿದ್ದಾರೆ. ಶುಕ್ರವಾರ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಓಂ ನಮೋ ನಾರಾಯಣ ಕೇವಲ 9 ಮತಗಳನ್ನು ಪಡೆದು ಸೋಲು ಅನುಭವಿಸಿದರು. ವೀರೇಂದ್ರ ಪ್ರಸಾದ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಬಲಿತ ಅಭ್ಯರ್ಥಿ ಎಂದು ಮೂಲಗಳು ತಿಳಿಸಿವೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry