ಬಿಜೆಪಿ ಬಿಕ್ಕಟ್ಟಿಗೆ ಪರಿಹಾರ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

7

ಬಿಜೆಪಿ ಬಿಕ್ಕಟ್ಟಿಗೆ ಪರಿಹಾರ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Published:
Updated:

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಬಿಕ್ಕಟ್ಟು ಶಮನ ಮಾಡುವ ಉದ್ದೇಶದಿಂದ ಪಕ್ಷದ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ತಡರಾತ್ರಿವರೆಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸೇರಿದಂತೆ ಇತರ ಪ್ರಮುಖರ ಜೊತೆ ಮಾತುಕತೆ ನಡೆಸಿದರು.

ಪ್ರಧಾನ್ ಶನಿವಾರ ಕೂಡ ಪಕ್ಷದ ಇತರ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದು, ಬಿಕ್ಕಟ್ಟು ಶಮನಗೊಳಿಸುವ ಪೂರ್ಣ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಬಣದ ಸಚಿವರೂ ಶನಿವಾರ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಲಿದ್ದಾರೆ. ಒಟ್ಟಿನಲ್ಲಿ ಸಂಜೆಯೊಳಗೆ ಬಿಕ್ಕಟ್ಟು ಪರಿಹರಿಸಿ ನಂತರ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಬಿಎಂಪಿ ಚುನಾವಣೆ ಸೇರಿದಂತೆ ಪಕ್ಷದ ಇತರ ಕೆಲಸಗಳಿಗೆ ಯಡಿಯೂರಪ್ಪ ಹಣ ನೀಡಿದ್ದರು ಎಂಬ ಕೈಮಗ್ಗ ನಿಗಮದ ಅಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ್ ಅವರ ಹೇಳಿಕೆ ಬಗ್ಗೆ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಯಿತು ಎನ್ನಲಾಗಿದೆ. ಈ ರೀತಿ ಹೇಳಿಕೆ ನೀಡುವವರ ವಿರುದ್ಧ ಶಿಸ್ತು ಕ್ರಮಕ್ಕೆ ಪ್ರಧಾನ್ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಸೇರಿದಂತೆ ಇತರ ಪ್ರಮುಖರು ಹಾಜರಿದ್ದರು. ಸಚಿವ ಜಗದೀಶ್ ಶೆಟ್ಟರ್ ಅವರು, ಸಭೆ ಆರಂಭವಾದ ಸ್ವಲ್ಪ ಹೊತ್ತಿನಲ್ಲೇ ಕೆಲಸದ ನಿಮಿತ್ತ ಹೊರನಡೆದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry