ಸೋಮವಾರ, ಏಪ್ರಿಲ್ 19, 2021
23 °C

ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಟ್ಕಳ (ಉ.ಕ.ಜಿಲ್ಲೆ): ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ 5ನೇ ಕಾರ್ಯಕಾರಿಣಿ ಸಭೆ ಭಟ್ಕಳ ತಾಲ್ಲೂಕಿನ ಮುರ್ಡೇಶ್ವರದ ಆರ್.ಎನ್.ಎಸ್. ಹೈವೇ ಹೋಟೆಲ್ ಸಭಾಂಗಣದಲ್ಲಿ ಇದೇ 24 ಮತ್ತು 25ರಂದು ನಡೆಯಲಿದೆ.ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ರೀನಾ ಪ್ರಕಾಶ್ ಗುರುವಾರ  ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಭೆಯ ವಿವರ ನೀಡಿದರು. `ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ, ರಾಷ್ಟ್ರೀಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಹಾಗೂ ಜಿಲ್ಲೆಯ ನಿಗಮ ಮಂಡಳಿ ಅಧ್ಯಕ್ಷರು ಭಾಗವಹಿಸಲಿದ್ದಾರೆ.ಆ. 24ರಂದು ನಡೆಯುವ ಮಹಿಳಾ ಮೋರ್ಚಾ ಸಭೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಉಪಾಧ್ಯಕ್ಷೆ ಸುಲೋಚನಾ ಭಟ್, ರಾಜ್ಯ ಕಾರ್ಯದರ್ಶಿ ಎಂ.ಬಿ. ನಂದೀಶ್ ಉಪಸ್ಥಿತರಿರುವರು.ಆ. 25ರಂದು ನಡೆಯುವ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಸ್ಮೃತಿ ಇರಾನಿ, ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಂಸದ ಪ್ರಹ್ಲಾದ್ ಜೋಷಿ ಭಾಗವಹಿಸಲಿದ್ದಾರೆ~ ಎಂದು ತಿಳಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.