ಗುರುವಾರ , ಮೇ 26, 2022
22 °C

ಬಿಜೆಪಿ ಮಾಧ್ಯಮ ಸಂಯೋಜಕರ ತಂದೆ ಕಣ್ಮರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಮಾಧ್ಯಮ ಸಂಯೋಜಕ ಎಸ್. ಪ್ರಕಾಶ್ ಅವರ ತಂದೆ ಶೇಷ ರಾಘವಚಾರ್ (90) ಅವರು ಬುಧವಾರ ಬೆಳಿಗ್ಗೆಯಿಂದ ಕಾಣೆಯಾಗಿದ್ದಾರೆ. ಪ್ರಕಾಶ್ ಅವರು ಶೇಷಾದ್ರಿಪುರ ಠಾಣೆಯಲ್ಲಿ ದೂರು ನೀಡಿದ್ದಾರೆ.`ಬೆಳಿಗ್ಗೆ 8.30ರ ಸುಮಾರಿಗೆ ವಾಯು ವಿಹಾರಕ್ಕೆ ಹೋಗುವುದಾಗಿ ಹೇಳಿ ಹೋದವರು, ಹನ್ನೊಂದು ಗಂಟೆಯಾದರೂ ಮನೆಗೆ ಹಿಂತಿರುಗಿಲ್ಲ. ಸಂಬಂಧಿಕರು, ಸ್ನೇಹಿತರ ಮನೆಯಲ್ಲೆಲ್ಲಾ ಶೋಧ ನಡೆಸಿದ್ದು ತಡರಾತ್ರಿಯಾದರೂ ಪತ್ತೆಯಾಗಿಲ್ಲ~ ಎಂದು ಪ್ರಕಾಶ್ `ಪ್ರಜಾವಾಣಿ~ಗೆ ತಿಳಿಸಿದರು. ಹಿರಿಯ ಪತ್ರಕರ್ತರಾದ ಶೇಷ ರಾಘವಚಾರ್, ಶೇಷಾದ್ರಿಪುರದಲ್ಲಿ ಕುಟುಂಬ ಸದಸ್ಯರೊಂದಿಗೆ ವಾಸವಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.