ಶುಕ್ರವಾರ, ಫೆಬ್ರವರಿ 26, 2021
26 °C

ಬಿಜೆಪಿ ಮುಖಂಡರು ಸಂಪರ್ಕದಲ್ಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಜೆಪಿ ಮುಖಂಡರು ಸಂಪರ್ಕದಲ್ಲಿ

ಬೆಂಗಳೂರು (ಪಿಟಿಐ): ಬಿಜೆಪಿ ಮರಳುವ ಕುರಿತಂತೆ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಮೌನ ಮುರಿದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಗೆ ಮರಳುವ ಒಲವು ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಬಿಜೆಪಿಯ ಕೆಲ ರಾಷ್ಟ್ರೀಯ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಗುರುವಾರ ತಿಳಿಸಿದರು.ಬಿಜೆಪಿಗೆ ಮರಳುವುದಕ್ಕೆ ಸಂಬಂಧಿಸಿದಂತೆ `ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ' ತೆಗೆದುಕೊಳ್ಳುತ್ತೇನೆ ಎಂದು ಕರ್ನಾಟಕ ಜನತಾ ಪಕ್ಷದ (ಕೆಜೆಪಿ) ಮುಖ್ಯಸ್ಥರು ಆಗಿರುವ ಯಡಿಯೂರಪ್ಪ ಹೇಳಿದರು.`ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಕೆಲ ರಾಷ್ಟ್ರೀಯ ನಾಯಕರೊಂದಿಗೆ ನಾನು ಈಗಾಗಲೇ (ಪಕ್ಷಕ್ಕೆ ಮರಳುವ ಕುರಿತಂತೆ) ಹಲವಾರು ಬಾರಿ ಮಾತುಕತೆ ನಡೆಸಿದ್ದೇನೆ. ಆದರೆ ಇವರೆಗೆ ನಾನು ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಈ ನಿಟ್ಟಿನಲ್ಲಿ ನನ್ನ ಪಕ್ಷದ ಇತರೆ ಮುಖಂಡರೊಂದಿಗೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರುತ್ತೇನೆ' ಎಂದು ಅವರು ತಿಳಿಸಿದರು.ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಬಿಜೆಪಿಯ ಒಂದು ಬಣದ ನಾಯಕರು ಯಡಿಯೂರಪ್ಪ ಅವರನ್ನು ಬಿಜೆಪಿಗೆ ಮರಳಿ ಕರೆತರುವ ನಿಟ್ಟಿನಲ್ಲಿ ಕಳೆದ ಕೆಲ ವಾರಗಳಿಂದ ತೀವ್ರ ಕಸರತ್ತು ನಡೆಸುತ್ತಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.