ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

7

ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Published:
Updated:

ಬೆಂಗಳೂರು: ಮತೀಯ ನಿರ್ದೇಶಿತ ಹಿಂಸಾಚಾರ ತಡೆ ಮಸೂದೆಯನ್ನು ಜಾರಿಗೊಳಿಸದಂತೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಬೆಂಗಳೂರು ನಗರ ಘಟಕದ ಸದಸ್ಯರು ನಗರದ ಎಂ.ಜಿ.ರಸ್ತೆಯ ಮಹಾತ್ಮಗಾಂಧಿ ಪ್ರತಿಮೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.`ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಈ ಮಸೂದೆಯನ್ನು ಜಾರಿಗೊಳಿಸಲು ಮುಂದಾಗಿದೆ. ಅಲ್ಪಸಂಖ್ಯಾತರು ಹಾಗೂ ಬಹುಸಂಖ್ಯಾತರೆಂದು ದೇಶವನ್ನು ವಿಭಜಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರ ಈ ಮಸೂದೆಯಲ್ಲಿ ಅಡಗಿದೆ~ ಎಂದು ಮಾಜಿ ಶಾಸಕ ನಿರ್ಮಲ್‌ಕುಮಾರ್ ಸುರಾನ ದೂರಿದರು.`ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆ ರಾಜ್ಯ ಸರ್ಕಾರಗಳಿಗೆ ಸಂಬಂಧಪಟ್ಟ ವಿಷಯ. ಆದರೆ ಕೇಂದ್ರ ಸರ್ಕಾರ ಈ ಮಸೂದೆಯನ್ನು ಜಾರಿಗೊಳಿಸುವ ಮೂಲಕ ರಾಜ್ಯಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ಯತ್ನಿಸುತ್ತಿದೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹಿಂಬಾಗಿಲ ಮೂಲಕ ಅಧಿಕಾರ ನಡೆಸುವ ದುರುದ್ದೇಶದಿಂದ ಕೇಂದ್ರ ಸರ್ಕಾರ ಈ ಮಸೂದೆಯನ್ನು ಜಾರಿಗೊಳಿಸಲು ಮುಂದಾಗಿದೆ~ ಎಂದು ಅವರು ಹೇಳಿದರು.ಮಸೂದೆ ಜಾರಿಗೊಳಿಸುವ ನಿರ್ಧಾರದಿಂದ ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ದೇಶದೆಲ್ಲೆಡೆ ಉಗ್ರ ಹೋರಾಟ ನಡೆಸಲಾಗುತ್ತದೆ. ಅಲ್ಲದೇ ಕೇಂದ್ರ ಸರ್ಕಾರದ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತದೆ ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.ಘಟಕದ ಅಧ್ಯಕ್ಷ ಕೆ.ಗಣೇಶ್, ಪ್ರಧಾನ ಕಾರ್ಯದರ್ಶಿ ಅನಿಲ್ ರಂಗಣ್ಣ, ಬಿಬಿಎಂಪಿ ಸದಸ್ಯ ಎನ್.ಚಂದ್ರಶೇಖರ್ ರಾಜು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry