ಭಾನುವಾರ, ಮಾರ್ಚ್ 7, 2021
28 °C

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್‌ ಷಾ ಪುನರಾಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್‌ ಷಾ ಪುನರಾಯ್ಕೆ

ನವದೆಹಲಿ (ಪಿಟಿಐ): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್‌ ಷಾ (51) ಭಾನುವಾರ ಪುನರಾಯ್ಕೆಯಾಗಿದ್ದಾರೆ.ಬಿಜೆಪಿಯನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಷಾ ಅವರ ಅಧಿಕಾರ ಅವಧಿ ಶನಿವಾರ (ಜ.23) ಕೊನೆಗೊಂಡಿತ್ತು. ಮುಂದಿನ ಮೂರು ವರ್ಷಗಳ ಅವಧಿಗೆ ಭಾನುವಾರ ಅವರು ಪುನರಾಯ್ಕೆಯಾಗಿದ್ದಾರೆ.  ಪಕ್ಷದ ಉಪಾಧ್ಯಕ್ಷ ಅವಿನಾಶ್‌ ರೈ ಖನ್ನಾ ಕೂಡ ಷಾ ಆಯ್ಕೆಯನ್ನು ಬೆಂಬಲಿಸುವುದಾಗಿ  ಪ್ರಕಟಿಸಿದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾದರು.ಪ್ರಧಾನಿ ನರೇಂದ್ರ ಮೋದಿ ಅವರು  ಅಮಿತ್‌ ಷಾ ಅವರಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್‌ ಮಾಡಿದ್ದಾರೆ.

ಷಾ ಅವರನ್ನು ಪೂರ್ಣಾವಧಿಗೆ ಅಧ್ಯಕ್ಷರಾಗಿ ಮುಂದುವರಿಸುವುದಕ್ಕೆ ಆರ್‌ಎಸ್‌ಎಸ್‌ ಬೆಂಬಲ ಸೂಚಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರೂ ಬೆಂಬಲ ನೀಡಿದ್ದರು.2014ರ ಜುಲೈ 9 ರಂದು ಷಾ  ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಈ ಹಿಂದೆ ಅಧ್ಯಕ್ಷರಾಗಿದ್ದ ರಾಜನಾಥ್‌ ಸಿಂಗ್‌ ಕೇಂದ್ರ ಸಂಪುಟ ಸೇರಿದ್ದರು.ಬಿಜೆಪಿ ಹೈಕಮಾಂಡ್‌ 20 ರಾಜ್ಯಗಳ ಅಧ್ಯಕ್ಷರನ್ನು ಆಯ್ಕೆ ಮಾಡಿದೆ. ಇನ್ನೂ 5 ರಾಜ್ಯಗಳ ಅಧ್ಯಕ್ಷರ ನೇಮಕ ಸದ್ಯದಲ್ಲೇ ನಡೆಯಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.