ಬಿಜೆಪಿ ವಶಕ್ಕೆ ಗುಲ್ಬರ್ಗ ತಾಪಂ

7

ಬಿಜೆಪಿ ವಶಕ್ಕೆ ಗುಲ್ಬರ್ಗ ತಾಪಂ

Published:
Updated:

ಗುಲ್ಬರ್ಗ: ಗುಲ್ಬರ್ಗ ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರಾಗಿ ಚೆನ್ನವೀರಪ್ಪ ಸಲಗರ ಹಾಗೂ ಉಪಾಧ್ಯಕ್ಷೆಯಾಗಿ ತಾರಾಬಾಯಿ ಬಾಬುರಾವ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಎರಡೂ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ, ಚುನಾವಣಾಧಿಕಾರಿಯೂ ಆಗಿರುವ ಸಹಾಯಕಆಯುಕ್ತರು ಇಬ್ಬರ ಆಯ್ಕೆಯನ್ನು ಪ್ರಕಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ರೇವುನಾಯಕ ಬೆಳಮಗಿ ಅವರ ಮತಕ್ಷೇತ್ರ ವ್ಯಾಪ್ತಿಯ ಕುರಿಕೋಟ ಮತ್ತು ಪಕ್ಕದ ಡೊಂಗರಗಾಂವ್ ತಾಲ್ಲೂಕು ಪಂಚಾಯಿತಿ ಸದಸ್ಯರು ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿ, ಅಧಿಕಾರದ ಗದ್ದುಗೆ ಹಿಡಿದಿದ್ದಾರೆ.ಒಟ್ಟು 26 ಸದಸ್ಯ ಬಲದ ತಾಲ್ಲೂಕು ಪಂಚಾಯಿತಿಯಲ್ಲಿ ಬಿಜೆಪಿ 18 ಸದಸ್ಯರೊಂದಿಗೆ ಸ್ಪಷ್ಟ ಬಹುಮತ ಪಡೆದಿದೆ. ಉಳಿದಂತೆ ಕಾಂಗ್ರೆಸ್‌ನ ಆರು ಮತ್ತು ಜೆಡಿಎಸ್‌ನ ಇಬ್ಬರು ಸದಸ್ಯರು ಇದ್ದಾರೆ.ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿಯಿಂದ ಚೆನ್ನವೀರಪ್ಪ, ಅನಿಲ್‌ಕುಮಾರ, ಪ್ರಭು ನಾಮಪತ್ರ ಸಲ್ಲಿಸಿದ್ದರೆ, ಕಾಂಗ್ರೆಸ್ ಪಕ್ಷದದಿಂದ ಮಹಾಂತೇಶ ಅವರು ನಾಮಪತ್ರ ಸಲ್ಲಿಸಿದ್ದರು. ಆದರೆ ಕೊನೇ ಗಳಿಗೆಯಲ್ಲಿ ಅನಿಲ್‌ಕುಮಾರ್, ಪ್ರಭು ಹಾಗೂ ಮಹಾಂತೇಶ ಅವರು ತಮ್ಮ ನಾಮಪತ್ರಗಳನ್ನು ವಾಪಸು ಪಡೆದರು. ಇದರಿಂದಾಗಿ ಚೆನ್ನವೀರಪ್ಪ ಅವರ ಆಯ್ಕೆ ಅವಿರೋಧವಾಗಿ ನಡೆಯಿತು.ವಿಜಯೋತ್ಸವ: ಇಬ್ಬರ ಆಯ್ಕೆ ಪ್ರಕಟವಾಗುತ್ತಿದ್ದಂತೆ, ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಹೊರಗೆ ಸೇರಿದ್ದ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಘೋಷಣೆ ಕೂಗಿ ಸಂಭ್ರಮಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry