`ಬಿಜೆಪಿ ಸಂಘಟನೆಗೆ ಶ್ರಮಿಸಿ'

5

`ಬಿಜೆಪಿ ಸಂಘಟನೆಗೆ ಶ್ರಮಿಸಿ'

Published:
Updated:

ಬೀದರ್: ಕಾರ್ಯಕರ್ತರು ಬಿಜೆಪಿ ಸಂಘಟನೆ ಬಲಪಡಿಸಲು ಶ್ರಮಿಸಬೇಕು ಎಂದು ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷ ಶಿವರಾಜ ಗಂದಗೆ ಸಲಹೆ ಮಾಡಿದರು.ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದರು.ಪಕ್ಷದ ಕಾರ್ಯಕರ್ತರು ಶಿಸ್ತು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಬಗೆಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಮುಂಬರುವ ದಿನಗಳಲ್ಲಿ ಬೂತ್‌ಮಟ್ಟದ ಸಮಾವೇಶಗಳನ್ನು ನಡೆಸಬೇಕಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಬುವಾಲಿ ಹೇಳಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರೇವಣಸಿದ್ಧಪ್ಪ ಜಲಾದೆ ಮಾತನಾಡಿದರು.ರಾಜ್ಯ ಕಾರ್ಯಕಾರಿಣಿ ಸದಸ್ಯರಾದ  ಬಸವರಾಜ ಆರ್ಯ, ಪದ್ಮಾಕರ ಪಾಟೀಲ್, ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ರೌಫೊದ್ದೀನ್ ಕಚೇರಿವಾಲೆ, ಜಿಲ್ಲಾ ವಕ್ತಾರ ಬಸವರಾಜ  ಪವಾರ್, ಮಹೇಶ್ ಪಾಲಂ, ಜಯಕುಮಾರ್ ಕಾಂಗೆ ಉಪಸ್ಥಿತರಿದ್ದರು.ಜಿಲ್ಲಾ ಕಾರ್ಯದರ್ಶಿ ಉಪೇಂದ್ರ ದೇಶಪಾಂಡೆ ನೆರವೇರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry