ಬಿಜೆಪಿ ಸರ್ಕಾರ ಸಂಪೂರ್ಣ ವಿಫಲ

ಭಾನುವಾರ, ಜೂಲೈ 21, 2019
25 °C

ಬಿಜೆಪಿ ಸರ್ಕಾರ ಸಂಪೂರ್ಣ ವಿಫಲ

Published:
Updated:

ಚಿತ್ರದುರ್ಗ: ಕೇಂದ್ರದ ಅನುದಾನ ಬಳಸಿಕೊಳ್ಳುವಲ್ಲಿ ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷಡಾ.ಜಿ. ಪರಮೇಶ್ವರ್ ಆರೋಪಿಸಿದರು.ಗುರುವಾರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದ ಅವರು, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ವಶಿಕ್ಷಾ ಅಭಿಯಾನ ಅಡಿಯಲ್ಲಿ ರಾಜ್ಯಕ್ಕೆ ್ಙ 4,960 ಕೋಟಿ ಅನುದಾನ ಬಿಡುಗಡೆ ಮಾಡಿದ್ದರೂ ರಾಜ್ಯ ಸರ್ಕಾರ ್ಙ 560 ಕೋಟಿ ಮಾತ್ರ ಬಳಸಿದೆ. ಉದ್ಯೋಗ ಖಾತ್ರಿ ಯೋಜನೆಗ್ಙೆ 4,900 ಕೋಟಿ ಬಿಡುಗಡೆ ಮಾಡಿದ್ದರೂ ್ಙ 1,900 ಕೋಟಿ ಮಾತ್ರ ಖರ್ಚು ಮಾಡಿದೆ. ಆದರೂ, ಬಿಜೆಪಿ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದಲ್ಲಿನ ಯುಪಿಎ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ದೂರಿದರು.ಹೈದರಾಬಾದ್ ಕರ್ನಾಟಕಕ್ಕೆ 371ನೇ ಕಲಂ ಅಡಿ ವಿಶೇಷ ಸ್ಥಾನಮಾನ ಕಲ್ಪಿಸಲು ಬಿಜೆಪಿ ಇದುವರೆಗೆ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ವಿಶೇಷ ಸ್ಥಾನಮಾನ ನೀಡುವ ಬೇಡಿಕೆಯನ್ನು ಈ ಹಿಂದೆ ಎನ್‌ಡಿಎ ಸರ್ಕಾರದಲ್ಲಿ ಉಪ ಪ್ರಧಾನಿಯಾಗಿದ್ದ ಎಲ್.ಕೆ. ಅಡ್ವಾಣಿ ಅವರೇ ತಿರಸ್ಕರಿಸಿದ್ದರು. 

ಈಗ ಪ್ರಧಾನಿ ಡಾ.ಮನಮೋಹನ್‌ಸಿಂಗ್ ಅವರು, ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಕಲಂ 371ಡಿ ಬದಲಾಗಿ 371(2) ಪ್ರಕಾರ ಸ್ಥಾನಮಾನ ಕಲ್ಪಿಸಲು ಒಪ್ಪಿಗೆ ಸೂಚಿಸಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಆದರೆ, ಬಿಜೆಪಿ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೇವಲ ಬೂಟಾಟಿಕೆಗಾಗಿ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.ಬೇಜವಾಬ್ದಾರಿಯಿಂದ ವರ್ತಿ ಸುತ್ತಿರುವ ಬಿಜೆಪಿ ಸರ್ಕಾರ, ಎಲ್ಲ ಕ್ಷೇತ್ರಗಳಲ್ಲಿ ವಿಫಲವಾಗಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು `ಕಾಂಗ್ರೆಸ್ ನಡಿಗೆ- ಜನರ ಬಳಿಗೆ~ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕಾರ್ಯಕರ್ತರಿಂದ ಮುಖಂಡರು ದೂರವಾಗಿದ್ದಾರೆ ಎನ್ನುವ ಭಾವನೆ ಉಂಟಾಗಿದೆ. ಅದನ್ನು ನಿವಾರಿಸಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ವಿವರಿಸಿದರು.60 ದಿನಗಳ ಈ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿನ 46,600 ಬೂತ್‌ಗಳಲ್ಲಿ ಸಮಿತಿ ರಚಿಸಲಾಗುವುದು. ಬಿಜೆಪಿ ಸರ್ಕಾರದ ವೈಫಲ್ಯಗಳು ಮತ್ತು ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಲು ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ವಿವರಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry