ಬುಧವಾರ, ಜೂನ್ 16, 2021
28 °C

ಬಿಜೆಪಿ ಸೇರಿದ ಎಂ.ಜೆ.ಅಕ್ಬರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಖ್ಯಾತ ಬರಹಗಾರ ಮತ್ತು ಹಿರಿಯ ಪತ್ರಕರ್ತ ಎಂ.ಜೆ.ಅಕ್ಬರ್ ಅವರು ಶನಿವಾರ ಬಿಜೆಪಿ ಸೇರಿದರು.1989ರಿಂದ 1991ರವರೆಗೆ ಕಾಂಗ್ರೆಸ್‌ನಿಂದ ಸಂಸದರಾಗಿ, 1989ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದ ಅಕ್ಬರ್ ಅವರು ಇದೀಗ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿಗೆ ಸೇರ್ಪಡೆಗೊಂಡರು.ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ಉಪಸ್ಥಿತಿಯಲ್ಲಿ ಪಕ್ಷ ಸೇರಿದ ನಂತರ ಮಾತನಾಡಿದ ಅಕ್ಬರ್ ಅವರು `ನಾವೆಲ್ಲರೂ ತಿಳಿದಿರುವಂತೆ ದೇಶದ ಮುಂದೆ ಹಲವಾರು ಸಮಸ್ಯೆಗಳಿದ್ದು, ಅವುಗಳ ಪರಿಹಾರಕ್ಕಾಗಿ ನಾನು ರಾಜಕೀಯಕ್ಕೆ ಹಿಂದಿರುಗಿದ್ದೇನೆ. ನಮ್ಮ ದೇಶಕ್ಕಾಗಿ ಅಳಿಲು ಸೇವೆ ಸಲ್ಲಿಸಲು ಇದೊಂದು ಅವಕಾಶ' ಎಂದು ಹೇಳಿದರು.ಅಕ್ಬರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಮಾತನಾಡಿದ ರಾಜನಾಥ್ ಸಿಂಗ್ ಅವರು ಕ್ರೀಡೆ, ರಾಜಕೀಯ, ಚಿತ್ರರಂಗ ಮತ್ತು ಸಾಹಿತ್ಯ ಸೇರಿದಂತೆ ಹಲವಾರು ಕ್ಷೇತ್ರದ ಜನರು ಪಕ್ಷವನ್ನು ಸೇರುತ್ತಿದ್ದಾರೆ. ಸಧ್ಯ, ದೇಶಕ್ಕೆ ಸುಸ್ಥಿರ ಸರ್ಕಾರ ನೀಡುವ ನಿಟ್ಟಿನಲ್ಲಿ ಮಾಧ್ಯಮ ಕ್ಷೇತ್ರದ ದಿಗ್ಗಜರು ಕೂಡ ಬಿಜೆಪಿ ಸದಸ್ಯತ್ವ ಸ್ವೀಕರಿಸಿದ್ದಾರೆ. ಪಕ್ಷ ಸೇರುತ್ತಿರುವ ಮಾಧ್ಯಮದ ಕಟ್ಟಾಳು ಆಗಿರುವ ಅಕ್ಬರ್ ಅವರನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.