ಮಂಗಳವಾರ, ಜೂನ್ 15, 2021
27 °C

ಬಿಜೆಪಿ ಸೇರಿದ ರಾಂಕೃಪಾಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ಬಂಡೆದ್ದು, ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದ ರಾಂಕೃಪಾಲ್ ಯಾದವ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡರು.ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ಉಪಸ್ಥಿತಿಯಲ್ಲಿ ನಡೆದ ಸೇರ್ಪಡೆ ಸಮಾರಂಭದಲ್ಲಿ ಮಾತನಾಡಿದ ಯಾದವ್ ಅವರು `ನಾನು 35 ವರ್ಷಗಳ ಕಾಲ ಆರ್‌ಜೆಡಿಯ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿರುವೆ. ಆದರೆ, ಕೆಲ ಒತ್ತಡಗಳು ನಾನು ಈ ನಿರ್ಧಾರ ತೆಗೆದುಕೊಳ್ಳಲು ಕಾರಣವಾದವು' ಎಂದು ಹೇಳಿದರು.

ಇದೇ ವೇಳೆ ಲಾಲು ಅವರ ವಿರುದ್ಧ ವಾಗ್ಧಾಳಿ ನಡೆಸಿದ ರಾಂಕೃಪಾಲ್ ಅವರು `ಆರ್‌ಜೆಡಿಯಲ್ಲಿ ಹೊರಗಿನವರಿಗಿಂತ ಕುಟುಂಬದೊಳಗಿನವರು ಪ್ರಾಮುಖ್ಯತೆ ಪಡೆಯುತ್ತಿದ್ದಾರೆ. ಇದರಿಂದ ನನ್ನಂತಹ ಸಾಮಾನ್ಯ ಕಾರ್ಯಕರ್ತರು ನೊಂದುಕೊಂಡಿದ್ದಾರೆ. ನಾವು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಬೇಕೆ ವಿನಹ ಒಂದು ಕುಟುಂಬಕ್ಕಾಗಿ ಅಲ್ಲ' ಎಂದು ಹೇಳಿದರು.ಲಾಲು ಅವರ ಪುತ್ರಿ ಮೀಸಾ ಅವರನ್ನು  ಬಿಹಾರದ ಪಾಟಲೀಪುತ್ರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ರಾಂಕೃಪಾಲ್ ಅವರು ಮುನಿಸಿಕೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.