ಮಂಗಳವಾರ, ಜನವರಿ 21, 2020
19 °C

ಬಿಡಿಭಾಗ ಮಾರಾಟ ಮಳಿಗೆಯಲ್ಲಿ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಜೆ.ಸಿ.ರಸ್ತೆ­ಯಲ್ಲಿರುವ ಕಂಪ್ಯೂಟರ್‌ ಬಿಡಿ ಭಾಗಗಳ ಮಾರಾಟ ಮಳಿಗೆಗೆ ಶನಿವಾರ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ. ಜೆ.ಸಿ.ರಸ್ತೆಯಲ್ಲಿರುವ ಕಟ್ಟಡ­ವೊಂದರ ಎರಡನೇ ಮಹಡಿಯಲ್ಲಿ ವಿನೋದ್‌ಕುಮಾರ್ ಎಂಬುವರು ‘ಇಂಟರ್‌ಲಿಂಕ್‌ ಸಿಸ್ಟಮ್ಸ್‌’ ಹೆಸರಿನ ಕಂಪ್ಯೂಟರ್‌ ಬಿಡಿ ಭಾಗಗಳ ಮಾರಾಟ ಮಳಿಗೆ ಇಟ್ಟುಕೊಂಡಿದ್ದಾರೆ.

ಸಂಜೆ 4.15ರ ಸುಮಾರಿಗೆ ಆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಳಗೆ ಕೆಲಸ ಮಾಡುತ್ತಿದ್ದ ಯುವಕರು ಕೂಡಲೇ ಹೊರಗೆ ಓಡಿ ಬಂದು ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ವಿಷಯ ತಿಳಿದು ನಾಲ್ಕು ವಾಹನಗಳಲ್ಲಿ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ, ಸುಮಾರು ಎರಡು ತಾಸುಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.ಘಟನೆಯಲ್ಲಿ ಕಂಪ್ಯೂಟರ್‌ಗಳು, ಬಿಡಿ ಭಾಗಗಳು ಸೇರಿದಂತೆ ಸುಮಾರು ₨ 15 ಲಕ್ಷದ ವಸ್ತುಗಳು ಸುಟ್ಟುಹೋಗಿವೆ ಎಂದು ವಿನೋದ್‌ ಹೇಳಿಕೆ ಕೊಟ್ಟಿದ್ದಾರೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಈ ದುರ್ಘಟನೆ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ

ಎಂದು ಕಲಾಸಿಪಾಳ್ಯ ಪೊಲೀಸರು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)