ಸೋಮವಾರ, ಮೇ 17, 2021
30 °C

ಬಿತ್ತನೆ ಬೀಜ: 9.50 ಲಕ್ಷ ಕ್ವಿಂಟಲ್ ಲಭ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಮುಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ 8.30 ಲಕ್ಷ ಕ್ವಿಂಟಲ್ ಬಿತ್ತನೆ ಬೀಜದ ಅವಶ್ಯಕತೆ ಇದ್ದು, ಸುಮಾರು 9.50 ಲಕ್ಷ ಕ್ವಿಂಟಲ್ ಗುಣಮಟ್ಟದ ಬಿತ್ತನೆ ಬೀಜ ಲಭ್ಯವಿದೆ. ಬೇಡಿಕೆಗಿಂತ ಜಾಸ್ತಿ ದಾಸ್ತಾನು ಇದೆ~ ಎಂದು ಕೃಷಿ ಹಾಗೂ ಆಹಾರ ಸಂಸ್ಕರಣೆ ಸಚಿವ ಉಮೇಶ್ ವಿ. ಕತ್ತಿ ತಿಳಿಸಿದರು.ಕೃಷಿ ಇಲಾಖೆಯ ಶತಮಾನೋತ್ಸವ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಶುಕ್ರವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, `ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜದ ಪೂರೈಕೆಗೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏಪ್ರಿಲ್ ಅಂತ್ಯದೊಳಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ದಾಸ್ತಾನು ಮಾಡಲು ಸೂಚನೆ ನೀಡಲಾಗಿದೆ. ಮಳೆ ಸ್ಥಿತಿ ನೋಡಿಕೊಂಡು ಈ ತಿಂಗಳ ಅಂತ್ಯದ ವೇಳೆಗೆ ರೈತರಿಗೆ ಬೀಜ ವಿತರಣೆ ಮಾಡಲಾಗುವುದು~ ಎಂದರು.`ಬರಗಾಲಪೀಡಿತ ಪ್ರದೇಶದ ಕೃಷಿಕರಿಗೆ ರಸಗೊಬ್ಬರ, ಬಿತ್ತನೆಬೀಜ ವಿತರಣೆಯಲ್ಲಿ ಸಬ್ಸಿಡಿ ಹೆಚ್ಚಿಸುವ ಬಗ್ಗೆ 2- 3 ದಿನಗಳಲ್ಲಿ ನಿರ್ಧಾರಕ್ಕೆ ಬರಲಾಗುವುದು. ಬರಗಾಲಪೀಡಿತ ಪ್ರದೇಶದ ರೈತರಿಗೆ ಕಳೆದ ವರ್ಷವೇ ಸಬ್ಸಿಡಿ ನೀಡಲಾಗಿದೆ. ಈ ಬಾರಿ ಸಬ್ಸಿಡಿ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗಿದೆ~ ಎಂದರು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.