ಸೋಮವಾರ, ಜೂನ್ 21, 2021
30 °C

ಬಿದರಿ ಕಾರಿಗೆ ವಾಹನ ಡಿಕ್ಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಅವರ ಕಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿರುವ ಘಟನೆ ನಗರದ ಹೆಬ್ಬಾಳ ಮೇಲು ಸೇತುವೆ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಘಟನೆಯಲ್ಲಿ ಬಿದರಿ ಅವರಿಗೆ ಪೆಟ್ಟಾಗಿಲ್ಲ. ಆದರೆ, ಕಾರಿನ ಹಿಂಭಾಗ ಜಖಂಗೊಂಡಿದೆ. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದ ಶಂಕರ ಬಿದರಿ ಅವರು ಬೆಳಿಗ್ಗೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಬಿಐಎಎಲ್) ಬೆಳಿಗ್ಗೆ 8.30ಕ್ಕೆ ಬಂದರು.

ಬಿಐಎಎಲ್‌ನಿಂದ ಸರ್ಕಾರಿ ಕಾರಿನಲ್ಲಿ ಬಿಟಿಎಂ ಲೇಔಟ್‌ನಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದಾಗ ಅಪರಿಚಿತ ವಾಹನ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.